Friday, January 10, 2025

ಬೆಳ್ಳಂ ಬೆಳಗ್ಗೆ ರಾಜ್ಯದಲ್ಲಿ ‘ಲೋಕಾ’ ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಬೆಳ್ಳಂ ಬೆಳಗ್ಗೆ ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಕೆಲ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹೌದು, ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆ ಮೇಲೆ ರೇಡ್ ಆಗಿದ್ದು ಪರಿಶೀಲನೆ ನಡೆಯುತ್ತಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್​​ಪಿ ಅಶೋಕ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾ ಅಧಿಕಾರಿಗಳು ಫೀಲ್ಡ್​ಗೆ ಇಳಿದಿದ್ದಾರೆ.

ಇನ್ನೂ  ತಾ.ಪಂ. EO ಎನ್​​.ವೆಂಕಟೇಶಪ್ಪಗೆ ಸೇರಿದ 5 ಮನೆಗಳ ಮೇಲೆ ರೇಡ್ ಆಗಿದೆ . ಬಂಗಾರಪೇಟೆ ಪಟ್ಟಣದ ಮೂರು ಕಡೆ ಹಾಗೂ ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿ ಗ್ರಾಮದ 2 ಕಡೆ ಲೋಕಾಯುಕ್ತ ಎಸ್​​ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.ಕೋಲಾರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ.

ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಹಾಗೂ‌ ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಅವರ ಶಿಕಾರಿಪುರದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ಹಾಗೂ ನಿವೃತ್ತ ಡಿಸಿಎಫ್ ನಾಗರಾಜ್ ಅವರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ತೋಟದ ಮನೆಯ ಮೇಲೂ ದಾಳಿ ನಡೆದಿದೆ. ಇಬ್ಬರು ಅಧಿಕಾರಿಗಳ ಏಳು ಸ್ಥಳಗಳ ಮೇಲೆ ಏಕ ಕಾಲಕ್ಕೆ ರೇಡ್ ಆಗಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಬೆಂಗಳೂರಿನ BBMP ಎಇಇ ಟಿ.ಹನುಮಂತರಾಯ ಮನೆ ಮೇಲೆ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೋಚಾಪುರ ಗ್ರಾಮದ ಬಳಿಯ ಫಾರ್ಮ್​ ಹೌಸ್ ಮೇಲೆ ಲೋಕಾಯುಕ್ತ ಎಸ್​ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್​ ವಿಜಯಕುಮಾರ್​ ಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೀದರ್​​ನ ಆನಂದ್ ನಗರ ಮನೆ, ಬಸವಕಲ್ಯಾಣದ ಮನೆ, ಕಚೇರಿ, ನಗರದ ಗ್ಯಾರೆಜ್ ಮೇಲೂ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ​ ಅವರ ಬೀದರ್​ನ ಗುರುನಗರದ ಮನೆ, ನೌಬಾದ್​​ನ ಕಚೇರಿಯಲ್ಲಿ ಪರಿಶೀಲನೆ ನಡೆಯುತ್ತಿದೆ.

ಬೆಳ್ತಂಗಡಿಯಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡಮನೆ ಮೇಲೆ ಐಟಿ ದಾಳಿ ನಡೆದಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ ಮನೆ, ಪ್ರಸನ್ನ ಇನ್ಸ್ಟಿಟ್ಯೂಷನ್​​, ಇಂದುಬೆಟ್ಟುವಿನ ಮನೆಯಲ್ಲಿ 20ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

RELATED ARTICLES

Related Articles

TRENDING ARTICLES