Thursday, January 23, 2025

IPL 2023: ಐಪಿಎಲ್​ನಲ್ಲಿಂದು ಗುಜರಾತ್-ಮುಂಬೈ ನಡುವೆ ಹೈವೋಲ್ಟೇಜ್ ಪಂದ್ಯ

ಕ್ರಿಕೆಟ್​ ಅಭಿಮಾನಿಗಳಿಗೆ ಇಂದು ಸಖತ್​ ಎಂಟರ್‌ಟೈನ್‌ಮೆಂಟ್ ಮಾಡಲು ಗುಜರಾತ್ ಟೈಟಾನ್ಸ್ ತಂಡ ಹಾಗೂ ಮುಂಬೈ ಇಂಡಿಯನ್ಸ್ (GT vs MI) ಸಜ್ಜಾಗಿವೆ.

ಹೌದು, ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಮಹತ್ವದ ಪಂದ್ಯ ನಡೆಯಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಹಾಗೂ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ (GT vs MI) ಮುಖಾಮುಖಿ ಆಗಲಿದ್ದಾರೆ.

ಹೌದು,ಎರಡೂ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಜಿಟಿ ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು, ಎರಡು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನೂ ಮುಂಬೈ ಆಡಿದ ಆರು ಪಂದ್ಯಗಳಲ್ಲಿ ತಲಾ ಮೂರರಲ್ಲಿ ಸೋಲು-ಗೆಲುವು ಕಂಡು ಏಳನೇ ಸ್ಥಾನಲ್ಲಿದೆ.

ಗುಜರಾತ್ ತಂಡ: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶ್ವಾ ಲಿಟಲ್, ಯಶ್ ದಯಾಳ್, ಅಲ್ಜರಿ ಜೋಸೆಫ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಶ್ರೀಕರ್ ಭರತ್, ಅಭಿನವ್ ಮನೋಹರ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಒಡಿಯನ್ ಸ್ಮಿತ್, ಡೇವಿಡ್ ಮಿಲ್ಲರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಶಿವಂ ಮಾವಿ, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ಯಾಮ್ರೋನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಡ್ಯೂಯೆನ್ ಜಾನ್ಸೆನ್, ಪಿಯೂಷ್ ಚಾವ್ಲಾ, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ವಿಷ್ಣು ವಿನೋದ್, ಕುಮಾರ್ ಕಾರ್ತಿಕೇಯ, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ಸಂದೀಪ್ ವಾರಿಯರ್, ಜೋಫ್ರಾ ಆರ್ಚರ್, ಶಮ್ಸ್ ಮುಲಾನಿ, ಆಕಾಶ್ ಮಧ್ವಲ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್.

ಪಂದ್ಯ ನಡೆಯುವ ಸ್ಥಳ: ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ

ಸಮಯ: 7:30ಕ್ಕೆ 

 

RELATED ARTICLES

Related Articles

TRENDING ARTICLES