Thursday, December 19, 2024

‘ಕುಮಾರಣ್ಣ ಸಿಎಂ’ ಆಗೋದನ್ನು ಯಾರಿಂದಲೂ ತಡೆಯೋಕೆ ಆಗಲ್ಲ : ನಾಪಂಡ ಮುತ್ತಪ್ಪ

ಮಡಿಕೇರಿ : ಕುಮಾರಣ್ಣ ಮುಖ್ಯಮಂತ್ರಿ ಆಗೋದನ್ನು ಯಾರಿಂದಲೂ ತಡೆಯೋಕೆ ಸಾಧ್ಯವಿಲ್ಲ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂತೆ ದಿನವಾದ ಮಂಗಳವಾರ ಕುಶಾಲನಗರದಲ್ಲಿ ಅಪಾರ ಕಾರ್ಯಕರ್ತರೊಂದಿಗೆ ನಾಪಂಡ ಮುತ್ತಪ್ಪ ಅವರು ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಪ್ರಚಾರ ವೇಳೆ ಮಾತನಾಡಿದ ನಾಪಂಡ ಮುತ್ತಪ್ಪ, ರಾಜ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಾತ್ಯತೀತ ಜನತಾದಳ ಸರ್ಕಾರವು ಅಸ್ಥಿತ್ವಕ್ಕೆ ಬರಲಿದ್ದು, ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿಯಿಂದ ಅಭಿವೃದ್ಧಿ ಕುಂಠಿತ

ಕೊಡಗಿನಲ್ಲಿ ಕಳೆದ ಎರಡು ದಶಕಗಳಿಂದ ಬಿಜೆಪಿಯೇ ಅಧಿಕಾರದಲ್ಲಿದ್ದು, ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಅಲ್ಲದೇ ಮತದಾರರು ಕೂಡ ಈ ಬಾರಿ ಬದಲಾವಣೆ ಬಯಸಿದ್ದು, ಸ್ಥಳೀಯ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕೆಂಬ ಇಚ್ಛೆ ಹೊಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ : ‘ಜೆಡಿಎಸ್ ಶಕ್ತಿ’ ಏನು ಅಂತಾ ತೋರಿಸುತ್ತೇವೆ : ನಾಪಂಡ ಮುತ್ತಪ್ಪ

ಬಾರಿ ಜೆಡಿಎಸ್​ಗೆ ಬೆಂಬಲಿಸಿ

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರೈತರ ಸಾಲಮನ್ನಾ ಮಾಡುವ ಮೂಲಕ ದೇಶದ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ಮಾಡಿದ್ದರು. ಅದೇ ರೀತಿ ಈ ಬಾರಿ ಕೂಡ ಜನಪರ ಯೋಜನೆಗಳನ್ನು ರೂಪಿಸಿದ್ದಾರೆ. ಆದ್ದರಿಂದ ಈ ಬಾರಿ ಜೆಡಿಎಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಜನಪರ ಯೋಜನೆಗಳ ಜಾರಿ

ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ, ಸ್ವ-ಸಹಾಯ ಸಂಘಗಳ ಸಂಪೂರ್ಣ ಸಾಲ ಮನ್ನಾ, ಆಟೋ ಚಾಲಕರಿಗೆ ಮಾಸಿಕ ಸಹಾಯ ಧನ, ಹಿರಿಯ ನಾಗರಿಕರಿಗೆ ತಿಂಗಳಿಗೆ 5 ಸಾವಿರ ರೂ. ಮಾಶಾಸನ, ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್, ರೈತರ ಕೃಷಿಗೆ ಎಕರೆಗೆ ಹತ್ತು ಸಾವಿರ ರೂ. ಸಹಾಯಧನ ಹಾಗೂ ಇನ್ನೂ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕುಶಾಲನಗರ ತಾಲೂಕಿನ ಜೆಡಿಎಸ್‌ ಅಧ್ಯಕ್ಷ ಪಿ.ಡಿ ರವಿಕುಮಾರ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾಸಿರ್, ಜಿಲ್ಲಾ ಘಟಕದ ಉಪಾಧ್ಯಕ್ಷ ಚಂದ್ರು, ಮುಖಂಡರಾದ ಗಿರೀಶ್ ಮುಂತಾದವರು ಇದ್ದರು.

RELATED ARTICLES

Related Articles

TRENDING ARTICLES