Friday, May 17, 2024

‘ಕನ್ನಡಿಗರಿಗೆ ಅಮಿತ್ ಶಾ ಅವಮಾನ’ : ಸ್ವಾಭಿಮಾನಿಗಳನ್ನು ಬಡಿದೆಬ್ಬಿಸಿದ ಸಿದ್ದು

ಬೆಂಗಳೂರು : ‘ಕರ್ನಾಟಕದ ಭವಿಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿ ಕೊಡುವ ಚುನಾವಣೆ’ ಎನ್ನುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಚುನಾವಣೆ ಹೊತ್ತಲ್ಲೇ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ.

ಅಮಿತ್ ಶಾ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಅಮಿತ್ ಶಾ ಅವರೇ, ಕನ್ನಡಿಗರನ್ನು ಕೆಣಕಿದ್ದೀರಿ..ಅನುಭವಿಸುತ್ತೀರಾ..! ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯದ ಬಿಜೆಪಿ ನಾಯಕರು ನಿಮ್ಮ ಆಜ್ಞೆಗೆ ಗೋಣು ಆಡಿಸುವ ಗುಲಾಮರಾಗಿರಬಹುದು. ಆದರೆ, ನೆಲ, ಜಲ, ಭಾಷೆಯ ರಕ್ಷಣೆ ಮತ್ತು ಕನ್ನಡತನದ ಅಸ್ಮಿತೆಯ ಪ್ರಶ್ನೆ ಎದುರಾದಾಗ ನಮ್ಮ ಸ್ವಾಭಿಮಾನಿ ಕನ್ನಡಿಗರು ಜಾತಿ, ಧರ್ಮ, ಪಕ್ಷ, ಪಂಥ ಬಿಟ್ಟು ಬೀದಿಗೆ ಇಳಿದು ರಕ್ಷಿಸಿಕೊಳ್ಳುತ್ತಾರೆ ಎಂದು ಛೇಡಿಸಿದ್ದಾರೆ.

ಕನ್ನಡಿಗರಿಗೆ ಇದೆಂತ ಅವಮಾನ

ವಾರೆ ವ್ಹಾ ಅಮಿತ್ ಶಾ ಜೀ, ಇದು ಕರ್ನಾಟಕದ ಭವಿಷ್ಯವನ್ನು ನರೇಂದ್ರಮೋದಿ ಅವರ ಕೈಯಲ್ಲಿ ಕೊಡುವ ಚುನಾವಣೆ ಎಂಬ ಸತ್ಯವನ್ನೇ ಹೇಳಿದ್ದೀರಿ, ಧನ್ಯವಾದಗಳು. ಇದೆಂತ ಅವಮಾನ ಕನ್ನಡಿಗರಿಗೆ. ಕರ್ನಾಟಕದ ಭವಿಷ್ಯವನ್ನು ನೋಡಿಕೊಳ್ಳಲು ಒಬ್ಬ ಕನ್ನಡಿಗನೂ ಇಲ್ಲದಷ್ಟು ನಿಮ್ಮ ಪಕ್ಷ ದಿವಾಳಿಯಾಗಿದೆಯೇ? ಎಂದು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ : ಬಿಜೆಪಿಗೆ ಮತ ನೀಡಿದ್ರೆ ‘ಅಮೂಲ್’ಗೆ ಮತ ನೀಡಿದಂತೆ : ಜೆಡಿಎಸ್ ಲೇವಡಿ

ದೆಹಲಿ ದೊರೆ ಸೇವೆ ಮಾಡುವ ಗುಲಾಮರಲ್ಲ

ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಮತದಾರರು ಆಯ್ಕೆ ಮಾಡುವುದು ತಮ್ಮ ಸೇವೆ ಮಾಡುವ ಪ್ರತಿನಿಧಿಗಳನ್ನೇ ಹೊರತು, ದೆಹಲಿ ದೊರೆಯ ಸೇವೆ ಮಾಡುವ ಗುಲಾಮರನ್ನಲ್ಲ. ಅಮಿತ್ ಶಾ ಅವರೇ, ಪ್ರಜಾಪ್ರಭುತ್ವ ವ್ಯವಸ್ಥೆಗಷ್ಟೇ ಅಲ್ಲ ಸ್ವಾಭಿಮಾನಿ ಕನ್ನಡಿಗರಿಗೂ ನೀವು ಅವಮಾನ ಮಾಡಿದ್ದೀರಿ ಎಂದು ಸಿದ್ದರಾಮಯ್ಯ ಅವರು ಕುಟುಕಿದ್ದಾರೆ.

ಕರ್ನಾಟಕವನ್ನೇ ಖರೀದಿಸಲು ಹೊರಟಿದ್ದೀರಾ?

ನಮ್ಮ ಬ್ಯಾಂಕುಗಳು, ಬಂದರು, ವಿಮಾನನಿ ಲ್ದಾಣಗಳನ್ನು ಗುಜರಾತಿ ವ್ಯಾಪಾರಿಗಳಿಗೆ ಮಾರಿಬಿಟ್ಟಿರಿ. ನಮ್ಮ ಹೆಮ್ಮೆಯ ನಂದಿನಿಯನ್ನೂ ಕಬಳಿಸಲು ಹೊಂಚು ಹಾಕುತ್ತಿದ್ದೀರಿ. ಈಗ ಇಡೀ ಕರ್ನಾಟಕವನ್ನೇ ಖರೀದಿಸಲು ಹೊರಟಿದ್ದೀರಾ? ನಿಮ್ಮ ದುರಾಹಂಕಾರದ ಮಾತುಗಳಿಗೆ ರಾಜ್ಯದ ಸ್ವಾಭಿಮಾನಿ ಕನ್ನಡಿಗರು ಚುನಾವಣೆಯಲ್ಲಿಯೇ ಉತ್ತರ ನೀಡಲಿದ್ದಾರೆ. ಕಾದುನೋಡಿ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

RELATED ARTICLES

Related Articles

TRENDING ARTICLES