Sunday, December 22, 2024

ಗೂಟದ ಕಾರು ಕೊಡ್ತೀವಿ ಎಂದು ಜೆಡಿಎಸ್ ಅಭ್ಯರ್ಥಿಗೆ ಸೋಮಣ್ಣ ಆಮಿಷ..! ಆಡಿಯೋ ವೈರಲ್

ಚಾಮರಾಜನಗರ: ಸಚಿವ ಸೋಮಣ್ಣ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿರುವುದರಿಂದ ಚಾಮರಾಜನಗರ ಕೂಡ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ನಾಮಪತ್ರ ವಾಪಸ್ಸು ಪಡೆಯುವಂತೆ ಜೆಡಿಎಸ್ ಅಭ್ಯರ್ಥಿ ಆಲೂರು ಮಲ್ಲು (ಮಲ್ಲಿಕಾರ್ಜುನಸ್ವಾಮಿ)ಗೆ ಸಚಿವ ವಿ.ಸೋಮಣ್ಣ ಆಮಿಷವೊಡ್ಡಿರುವ ಆಡಿಯೋ ಒಂದು ವೈರಲ್ ಆಗಿದೆ.

ಹೌದು, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿ ಅವರಿಗೆ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸೋಮಣ್ಣ ಕರೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ಹೇಳುವ ಆಡಿಯೋ ತುಣುಕು ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. ಆಲೂರು ಮಲ್ಲು ಚಾಮರಾಜನಗರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ನೀಡಿದ್ದು, ನಾಮಪತ್ರ ಸಲ್ಲಿಸಿದ್ದರು.ಇನ್ನೂಸೋಮವಾರ ಬೆಂಬಲಿಗರೊಬ್ಬರು ಆಲೂರು ಮಲ್ಲು ಅವರಿಗೆ ಕರೆ ಮಾಡಿ, ಸೋಮಣ್ಣ ಬಳಿ ಮಾತನಾಡಿಸಿದ್ದಾರೆ. ಅದರಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ.

ಆಡಿಯೋದಲ್ಲಿ ಏನಿದೆ?

ಸೋಮಣ್ಣ: ‘ಏಯ್ ಮೊದ್ಲು ತಗೊಳಯ್ಯ, ಆಮೇಲೆ ಏನ್ ಬೇಕೋ ಮಾಡ್ತೀನಿ. ಏನಯ್ಯಾ ನೀನು, ಯಾವನದೋ ಮಾತು ಕೇಳ್ಕೊಂಡು… ಮಲ್ಲು ನೀನು ನನಗೆ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ ಮಗನ ಮಾತು ಕೇಳಕ್ಕೆ ಹೋಗಬೇಡ. ನಿನಗೆ ಬದುಕೋದಕ್ಕೆ ಏನು ಬೇಕೋ ಎಲ್ಲವೂ ಮಾಡ್ತೀನಿ. ಅಣ್ಣ ಇದ್ದಾರೆ. ಮೊದ್ಲು ವಾಪಸ್ ತಗೋ. ಆಮೇಲೆ ಬಾಕಿದ್ ಮಾತಾಡ್ತೀನಿ. ನನ್ನ ಮಾತು ಕೇಳು. ನಿನ್ನ ಹಿತ ಕಾಪಾಡೋದು ನನ್ನ ಜವಾಬ್ದಾರಿ, ಸುದೀಪಣ್ಣನ ಜವಾಬ್ದಾರಿ. ಮಲ್ಲು, ಮರಮ್‌ಕಲ್, ನಾನು, ಸುದೀಪಣ್ಣ ಮೂರು ಜನ ಇರ್ತೀವಿ. ಉಪ್ಪಾರರ ದೇವಸ್ಥಾನದಲ್ಲಿ ಇದ್ದೇನೆ. ಮೊದಲು ಆ ಕೆಲಸ ಮಾಡು. ನಿನಗೆ ಕೈ ಮುಗಿತೀನಿ ಎಂದು ಸೋಮಣ್ಣ ಹೇಳುತ್ತಿದ್ದಾರೆ ಎನ್ನಲಾದ ಆಡಿಯೋ ತುಣುಕಿನಲ್ಲಿದೆ. ಇಲ್ಲ, ನಾನು ಯಾರ ಮಾತು ಕೇಳ್ಕೊಂಡು ನಿಂತಿಲ್ಲ. ವಾಪಸ್ ತಗೆಯೋದಕ್ಕೆ ಆಗಲ್ಲಣ್ಣ. ನಿಮ್ಮ ಜೊತೆಗೇ ಇರ್ತೀನಿ. ನೀವು ಹೇಳಿದಂಗೆ ಇರ್ತೀನಿ ಬಿಡಣ್ಣ, ಮುಂದೆ ನೀವೇ ಮುಖ್ಯಮಂತ್ರಿ ಆಗಬೇಕು ಎಂದು ನಾನೂ ಬಯಸ್ತೀನಿ. ಯಾವನೋ ಪೋಲಿ ನನ್ ಮಗನ ಮಾತು ಕೋಳ್ಕೊಂಡು… ಮೊದಲು ವಾಪಸ್ ತಗೋ, ಮಲ್ಲು… ಸರ್ಕಾರ ಬರ್ತದೆ. ಗೂಟದ ಕಾರು ಮಾಡಿ ಕೊಡ್ತೀವಿ. ಮೊದ್ಲು ತಗೊ, ದೇವರ ಮುಂದೆ ನಿಂತಿದ್ದೀವಿ. ಯಾರನ್ನೂ ಕೇಳೊಕ್ಕೆ ಹೋಗ್ಬೇಡ. ನಾವೆಲ್ಲ ಮಾತಾಡುತ್ತೀವಿ. ಮೊದ್ಲು ವಾಪಸ್ ತಗೊ. ಈಗ ಟೈಮಿಲ್ಲ. ಹೀಗೆ ಸಂಭಾಷಣೆ ನಡೆದಿದೆ.

ಒಟ್ನಲ್ಲಿ ಲಿಂಗಾಯತ ವೋಟ್‌ಬ್ಯಾಂಕ್ ತಪ್ಪೋ ಆತಂಕದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ್ದಾರೆಂಬ ಚರ್ಚೆ ನಡೆದಿದೆ.

RELATED ARTICLES

Related Articles

TRENDING ARTICLES