Thursday, May 2, 2024

‘ನನ್ನ ತಮ್ಮ ಧೀರಜ್’ ಶಾಸಕನಾಗುವುದು ನಿಶ್ಚಿತ : ಸಿ.ಟಿ ರವಿ ವಿಶ್ವಾಸ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಏರುತ್ತಿದೆ. ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ದಿನನಿತ್ಯ ರಾಷ್ಟ್ರೀಯ ಮತ್ತು ರಾಜ್ಯದ ಬಿಜೆಪಿ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಎಸ್.ಆರ್.ವಿಶ್ವನಾಥ್ ಮತ್ತು ಬಿಜೆಪಿ ಒಬಿಸಿ ರಾಜ್ಯಾಧ್ಯಕ್ಷ ನರೇಂದ್ರ ಬಾಬು ಅವರು ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರ ಪರವಾಗಿ ಮತಯಾಚನೆ ಮಾಡಿದರು.

ಈ ವೇಳೆ ಮಾತನಾಡಿರುವ ಸಿ.ಟಿ ರವಿ ಅವರು, ದೊಡ್ಡಬಳ್ಳಾಪುರ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ನನ್ನ ತಮ್ಮ ಇದ್ದಂತೆ. ಅವರು ಮುಂದಿನ ದಿನಗಳಲ್ಲಿ ಶಾಸಕರಾಗಿ ಆಯ್ಕೆ ಆಗುವುದು ನಿಶ್ಚಿತ. ಕ್ಷೇತ್ರದ ಜನರು ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಧೀರಜ್ ಆಯ್ಕೆ ಬಿಜೆಪಿಗೆ ಸುಶಿಕ್ಷಿತ

ಅಮೆರಿಕದ ಟೆಕ್ಸಾಸ್ ವಿಶ್ವವಿದ್ಯಾಲಯದಿಂದ ಎಂಎಸ್ ಪದವಿ ಪಡೆದಿರುವ ಹಾಗೂ ಕೇವಲ 31 ವಯಸ್ಸಿನ ಇವರು ಅಭ್ಯರ್ಥಿಯಾಗಿರುವುದು ಬಿಜೆಪಿಗೆ ಸುಶಿಕ್ಷಿತ. ಯುವಜನತೆ ಮೇಲಿರುವ ದೃಢ ವಿಶ್ವಾಸಕ್ಕೆ ನಿದರ್ಶನ ಎಂದು ಸಿ.ಟಿ ರವಿ ಹೇಳಿದ್ದಾರೆ.

ಧೀರಜ್ ಮುನಿರಾಜುಗೆ ಭಾರೀ ಬೆಂಬಲ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಧೀರಜ್ ಮುನಿರಾಜು ಪರ ಮತ ಬೇಟೆ ನಡೆಸಿದರು. ರಾಷ್ಟ್ರೀಯ ಮತ್ತು ರಾಜ್ಯ ಬಿಜೆಪಿ ನಾಯಕರು ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕ್ಷೇತ್ರದ ಜನರು ಸಹ ಧೀರಜ್ ಮುನಿರಾಜು ಸಾಕಷ್ಟು ಬೆಂಬಲ ತೋರುತ್ತಿದ್ದಾರೆ.

ಇದನ್ನೂ ಓದಿ : ಧೀರಜ್ ಮುನಿರಾಜು ಪರ ಅಣ್ಣಾಮಲೈ ಮತ ಬೇಟೆ

ಧೀರಜ್ ಪರ ಅಮಿತ್ ಶಾ ಮತ ಬೇಟೆ

ಧೀರಜ್ ಮುನಿರಾಜ್ ಅವರು ಅತಿ ಚಿಕ್ಕ ವಯಸ್ಸಿಗೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಪ್ರಬಲವಾಗಿ ಅಭ್ಯರ್ಥಿಯಾಗಿ ಸ್ಫರ್ಧೆ ಮಾಡಿದ್ದಾರೆ. ಜೊತೆಗೆ ಚುನಾವಣೆಗೂ ಮುನ್ನ ಗೆಲುವಿನ ವಿಶ್ವಾಸ ತೋರುತ್ತಿರುವುದು ಕಾರ್ಯಕರ್ತರಲ್ಲಿ ಉಮ್ಮಸ್ಸು ತರುತ್ತಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಸಹ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಮತ ಬೇಟೆ ನಡೆಸಲಿದ್ದಾರೆ.

ಒಟ್ಟಾರೆ, ದೊಡ್ಡಬಳ್ಳಾಪುರದಲ್ಲಿ ವಿರೋಧ ಪಕ್ಷಗಳು ದೀರಜ್ ಮುನಿರಾಜು ಅಬ್ಬರಕ್ಕೆ ನಲುಗಿ ಹೋಗುತ್ತಿದ್ದಾರೆ. ಪ್ರತಿ ಗ್ರಾಮಗಳಲ್ಲಿ ದೀರಜ್ ಮುನಿರಾಜು ಪರ ಜನ ಸಾಗರವೇ ಹರಿದು ಬರುತ್ತಿದೆ. ಈಗಾಗಲೇ ಚುನಾವಣೆಯಲ್ಲಿ ದೀರಜ್ ಗೆದ್ದು ಬೀಗಿದ್ದಾರೆ. ಆದರೆ, ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರು ಹೇಳುತ್ತಿದ್ದಾರೆ.

RELATED ARTICLES

Related Articles

TRENDING ARTICLES