Friday, November 22, 2024

ಯಾರೋ ‘ನಾನೇ ಸಿಎಂ ಆಗಬೇಕು’ ಅಂತ ಕನಸು ಕಾಣ್ತಿದ್ದಾರೆ : ಎಚ್​ಡಿಕೆಗೆ ಸುಮಲತಾ ಟಕ್ಕರ್

ಮಂಡ್ಯ : ಸಂಸದೆ ಸುಮಲತಾ ಅಂಬರೀಶ್ ಅವರು ಮಾಜಿ ಮುಖ್ಯಮಂತ್ರಿ ಎಚ್.​ಡಿ ಕುಮಾರಸ್ವಾಮಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಯಾರೋ ಕನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಬರಲಿ ಅಂತ. ನಾನೇ ಸಿಎಂ ಆಗಬೇಕು ಅಂತ ಕನಸನ್ನು ಕಾಣುತ್ತಿದ್ದಾರೆ ಎಂದು ಎಚ್.ಡಿ ಕುಮಾರಸ್ವಾಮಿಗೆ ಟಕ್ಕರ್ ಕೊಟ್ಟಿದ್ದಾರೆ.

ಮಂಡ್ಯದಲ್ಲಿ ಬದಲಾವಣೆ ಬೇಕಿದೆ. ಕಳೆದ ಬಾರಿ ಚುನಾವಣೆಯಲ್ಲಿ 7ಕ್ಕೆ 7 ಶಾಸಕರನ್ನು ಆಯ್ಕೆ ಮಾಡಿದ್ರಿ. ಅವರೆಲ್ಲಾ ಯಾವ ಕೆಲಸ ಮಾಡಿದ್ದಾರೆ. ಒಂದು ಕುಟುಂಬದವರನ್ನು ಬೆಂಬಲಿಸಿದ್ದೀರಾ. ಒಂದೇ ಕುಟುಂಬ ಅಭಿವೃದ್ಧಿ ಆದರೆ ಸಾಕಾ ಎಂದು ಯೋಚಿಸಿ. ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಹಕರಿಸಿ ಎಂದು ಹೇಳಿದ್ದಾರೆ.

ಆದಿತ್ಯನಾಥ್​ರನ್ನು ಕೊಂಡಾಡಿದ ಸುಮಲತಾ

ಈ ಹಿಂದೆ ಉತ್ತರಪ್ರದೇಶ ಗೂಂಡಾ ರಾಜ್ಯ ಎಂಬ ಅಪಖ್ಯಾತಿಗೆ ಗುರಿಯಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ ಅವರು ಬಂದ ಮೇಲೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಜನ ತಾವು ಸಂಪಾದಿಸಿದ ಹಣವನ್ನು ರೌಡಿಗಳಿಗೆ ಹಫ್ತಾ ನೀಡಬೇಕಿತ್ತು. ಯೋಗಿ ಸರ್ಕಾರ ಬಂದ ಮೇಲೆ ರೌಡಿಗಳು ಓಡಿ ಹೋಗಿದ್ದಾರೆ. ಉತ್ತರ ಪ್ರದೇಶದಲ್ಲಿ ಜನರು ಈಗ ನಿರ್ಭಯವಾಗಿ ಒಡಾಡುತ್ತಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಅವರನ್ನು ಕೊಂಡಾಡಿದ್ದಾರೆ.

ಇದನ್ನೂ ಓದಿ : ಕುಮಾರಸ್ವಾಮಿ ‘ಈ.. ಹೇಳಿಕೆ ತುಂಬಾ ಹೇಸಿಗೆ’ ಅನಿಸುತ್ತೆ : ಸುಮಲತಾ ಕಿಡಿ

ಸಿಎಂ ಯೋಗಿ ಆದಿತ್ಯನಾಥ್ ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ ರೈತರು ಸಂಕಷ್ಟದಲ್ಲಿದ್ದರು. ರೈತರ ಬದುಕು ಹಸನಾಗಿಸಲು ಮೋದಿ ಅವರೇ ಬರಬೇಕಾಯಿತು. ಕೃಷಿ ಸಮ್ಮಾನ್ ನಿಧಿ, ಫಸಲ್ ಬಿಮಾ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಬದುಕನ್ನು ಸಮೃದ್ಧಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಸಕ್ಕರೆ ನಾಡಲ್ಲಿ ಯೋಗಿ ಭರ್ಜರಿ​ ರೋಡ್​ ಶೋ

ಇದಕ್ಕೂ ಮೊದಲು ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಗರದಲ್ಲಿ ರೋಡ್​ಶೋ ನಡೆಸಿದರು. ಸಂಜಯ್​ ವೃತ್ತದಿಂದ ಮಹಾವೀರ ಥಿಯೇಟರ್​ವರೆಗೆ ನಡೆದ ರೋಡ್​ಶೋನಲ್ಲಿ ಸಂಸದರಾದ ಪ್ರತಾಪ್ ಸಿಂಹ,  ಸುಮಲತಾ ಅಂಬರೀಶ್​, ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದಾರೆ.

RELATED ARTICLES

Related Articles

TRENDING ARTICLES