ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲಾಗಿದೆ. ಇದು ಡಬಲ್ ಇಂಜಿನ್ ಸರ್ಕಾರದ ದ್ರೋಹವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹೌದು, ಮೀಸಲಾತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ 9 ಪ್ರಶ್ನೆಗಳನ್ನು ಕೇಳಿದ್ದಾರೆ. ಅವು ಈ ಕೆಳಗಿನಂತಿವೆ…
1. ನೀವು ಲಿಂಗಾಯತರು, ಒಕ್ಕಲಿಗರು, ಎಸ್‌ಸಿ ಮತ್ತು ಎಸ್‌ಟಿಗಳ ಮೇಲೆ “ಮೀಸಲಾತಿ”ಯ ವಂಚನೆ ಆಟಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ 9 ಪ್ರಶ್ನೆಗಳನ್ನು ಕೇಳಿದ ಸುರ್ಜೆವಾಲ ಏಕೆ ಆಡಿದ್ದೀರಿ..?
2. ನೀವು ಸುಪ್ರೀಂ ಕೋರ್ಟ್‌ನಲ್ಲಿ ಮೀಸಲಾತಿಯನ್ನು ಏಕೆ ಸಮರ್ಥಿಸಲಿಲ್ಲ ?
3. ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲು ಬೊಮ್ಮಾಯಿ-ಮೋದಿ ಸರ್ಕಾರ ಏಕೆ ವಿಫಲವಾಯಿತು?
4. ಮಾರ್ಚ್ 14, 2023 ರಂದು ಸಂಸತ್ತಿನಲ್ಲಿ ಎಸ್‌ಸಿ-ಎಸ್ಟಿಗಳಿಗೆ ಹೆಚ್ಚಿದ ಮೀಸಲಾತಿಯನ್ನು ಮೋದಿ ಸರ್ಕಾರ ಏಕೆ ತಿರಸ್ಕರಿಸಿತು ?
5. ಎಸ್‌ಸಿ-ಎಸ್ಟಿಗಾಗಿ ಹೆಚ್ಚಿದ ಮೀಸಲಾತಿಯ ಕಾನೂನನ್ನು ಕೇಂದ್ರ ಸರ್ಕಾರವು ಸಂವಿಧಾನದ IX ನೇ ಶೆಡ್ಯೂಲ್‌ನಲ್ಲಿ ಏಕೆ ಹಾಕಲಿಲ್ಲ ?
6. ಎಸ್‌ಸಿ, ಎಸ್‌ಟಿಗಳ ಆಕಾಂಕ್ಷೆಗಳನ್ನು ಪೂರೈಸಲು ನೀವು ಮೀಸಲಾತಿಯ ಶೇ 50 ಸೀಲಿಂಗ್ ಅನ್ನು ಹೆಚ್ಚಿಸಲು ಏಕೆ ನಿರಾಕರಿಸುತ್ತಿದ್ದೀರಿ?
7. ಧ್ರುವೀಕರಣಕ್ಕಾಗಿ ನೀವು ಏಕೆ ಅನ್ಯಾಯವಾಗಿ ಅಲ್ಪಸಂಖ್ಯಾತರ ಮೀಸಲಾತಿಯನ್ನು ಗುರಿಯಾಗಿಸಿಕೊಂಡಿದ್ದೀರಿ?
8. ಬೊಮ್ಮಾಯಿ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೆ ನೀಡುವ ಮೂಲಕ ಮೀಸಲಾತಿ ಕುರಿತಾದ ತನ್ನದೆ ಆದ ಸರ್ಕಾರಿ ಆದೇಶವನ್ನು ಏಕೆ ತಡೆಹಿಡಿದಿದೆ ?
9. ಪ್ರಧಾನಮಂತ್ರಿಯವರು SC, ST ಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತಾರಾ ? ಲಿಂಗಾಯತರು, ಒಕ್ಕಲಿಗರು ಮತ್ತು ಇತರರು ಮೀಸಲಾತಿ ಹೆಸರಿನಲ್ಲಿ ಬಿಜೆಪಿ ಮಾಡಿದ ದ್ರೋಹಕ್ಕಾಗಿ..?
The BJP and the Bommai Government have committed an unpardonable sin of staying their own Reservation Order dated 27th March, 2023 by way of a statement made before the Supreme Court of India on 25th of April, 2023.
What the Congress Party has always said has come true – The… pic.twitter.com/WzVkY2a8H5
— Randeep Singh Surjewala (@rssurjewala) April 26, 2023