Sunday, December 22, 2024

Vijay Raghavendra : ವಿಜಯ್ ರಾಘವೇಂದ್ರ ಅಭಿನಯದ ’ರಾಘು’ ಸಿನಿಮಾ ಸದ್ಯದಲ್ಲಿ ತರೆಗೆ

ಬೆಂಗಳೂರು: ವಿಜಯ್ ರಾಘವೇಂದ್ರ ಅಭಿನಯದ ’ರಾಘು’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ 28ಕ್ಕೆ ಭಿನ್ನ ಕಥೆಯೊಂದಿಗೆ ತರೆ ಮೇಲೆ ಅಭಿಮಾನಿಗಳ ಮನ ಗೆಲ್ಲಲು ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಬರ್ತಿದ್ದಾರೆ.

ಹೌದು, ಆರಂಭದಿಂದಲೂ ವಿಭಿನ್ನ ಕಥಾನಕದ ಸುಳಿವು ನೀಡುವ ಮೂಲಕ ಚಿತ್ರಾಭಿಮಾನಿಗಳಿಗೆ ನಿರೀಕ್ಷೆ ಮೂಡಿಸಿರುವ ಬಹುನಿರೀಕ್ಷಿತ ರಾಘು ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಇನ್ನೂ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಟಿಸಿರುವ ಏಕವ್ಯಕ್ತಿ ಚಿತ್ರ ’ರಾಘು’ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಒಂದಿಷ್ಟು ಕೌತುಕಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ರಾಘು ಸಿನಿಮಾ ಪೂರ್ತಿ ವಿಜಯ್ ರಾಘವೇಂದ್ರ ಒಬ್ಬರೇ ಕಾಣಿಸಿಕೊಳ್ಳಲಿದ್ದಾರೆ.

ರಾಘು ಸಿನಿಮಾ ಈಗಾಗಲೇ ಸ್ಯಾಂಪಲ್ಸ್ ಮೂಲಕ ಭಾರೀ ಸದ್ದು ಮಾಡುತ್ತಿದೆ. ಈ ಹೊಸ ಬಗೆಯ ಕಥೆಗೆ ಎಂ ಆನಂದ್ ರಾಜ್ ಆಕ್ಷನ್ ಕಟ್ ಹೇಳಿದ್ದಾರೆ. ಆನ ಹಾಗೂ ಬ್ಯಾಂಗ್ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ದುಡಿದಿರುವ ಆನಂದ್ ಗೆ ರಾಘು ಚೊಚ್ಚಲ ಹೆಜ್ಜೆ. ಮೊದಲ ಹೆಜ್ಜೆಯಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿರುವುದು ಕುತೂಹಲ ಹೆಚ್ಚಿಸಿದೆ.

ಡಿಕೆ ಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್ ನಡಿ ರಾಘು ಸಿನಿಮಾವನ್ನು ರನ್ವಿತ್ ಶಿವಕುಮಾರ್ ಹಾಗೂ ಅಭಿಷೇಕ್ ಕೋಟ ನಿರ್ಮಾಣ ಮಾಡಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರುಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೂರಜ್ ಜೋಯಿಸ್ ಸಂಗೀತ ನಿರ್ದೇಶನ ಮಾಡಿರುವ ಈ ಚಿತ್ರದ ಎರಡು ಹಾಡುಗಳಿಗೆ ವಾಸುಕಿ ವೈಭವ್ ಹಾಗೂ all ok ಧ್ವನಿಯಾಗಿದ್ದಾರೆ.

RELATED ARTICLES

Related Articles

TRENDING ARTICLES