Wednesday, January 22, 2025

ಕಾಂಗ್ರೆಸ್ ಪಕ್ಷಕ್ಕೆ ಡಾ.ರಾಜ್ ಕುಮಾರ್ ಸೊಸೆ

ಬೆಂಗಳೂರು : ಚಂದನವನದ ವರನಟ ದಿವಂಗತ ಡಾ. ರಾಜ್ ಕುಮಾರ್ ಅವರ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾಳೆ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್‌ ಬಾವುಟ ಹಿಡಿಯಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಶಿವರಾಜ್ ಕುಮಾರ್ ಅವರು ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದರು.

ಇದನ್ನೂ ಓದಿ : ಅವ್ರು, ‘ಮೊಸರನ್ನ ಬೇಕು ಅಂತಾ, ಮಗು ಥರ ಹಠ’ ಮಾಡ್ತಾರೆ : ಅನಿತಾ ಕುಮಾರಸ್ವಾಮಿ

ಬಿಎಸ್ ವೈ ವಿರುದ್ಧ ಹೀನಾಯ ಸೋಲು

ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಎದುರಾಳಿಯಾಗಿ ಈ ಹಿಂದೆ ಜೆಡಿಎಸ್‌ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ ಅವರು ಕಣಕ್ಕಿಳಿದಿದ್ದರು. ಆಗ ಬಿಎಸ್ ವೈ ಎದುರು ಭಾರೀ ಮತಗಳ ಅಂತರದಿಂದ ಸೋಲು ಕಂಡಿದ್ದರು.

ಮಧು ಬಂಗಾರಪ್ಪ ಸಮ್ಮುಖದಲ್ಲಿ ಸೇರ್ಪಡೆ

ಮಧು ಬಂಗಾರಪ್ಪ ಅವರು ಈ ಹಿಂದೆ ಗೀತಾ ಶಿವರಾಜ್‌ಕುಮಾರ್ ಅವರು ಕಾಂಗ್ರೆಸ್‌ ಪಕ್ಷಕ್ಕೆ ಬಂದಿದ್ದಾರೆ ಅಂದುಕೊಳ್ಳಿ ಎಂಬ ಹೇಳಿಕೆ ನೀಡಿದ್ದರು. ಆ ಮೂಲಕ ಜೆಡಿಎಸ್ ತೊರೆದು ಕೈ ಸೇರ್ಪಡೆಯಾಗುಬ ಬಗ್ಗೆ ಸುಳಿವು ನೀಡಿದ್ದರು. ಅದರಂತೆ ನಾಳೆ ಮಧು ಬಂಗಾರಪ್ಪ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES