Monday, December 23, 2024

ಮತ್ತೊಮ್ಮೆ ಹೆಚ್ಚು ‘ಬಹುಮತದಿಂದ ನನ್ನನ್ನು ಗೆಲ್ಲಿಸಿ’ : ಸಚಿವ ಕೆ.ಗೋಪಾಲಯ್ಯ

ಬೆಂಗಳೂರು : ಸಚಿವ ಕೆ. ಗೋಪಾಲಯ್ಯ ಅವರು ಮಹಾಲಕ್ಷ್ಮಿ ಲೇಔಟ್ ಮತಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಹೋದ ಕಡೆಗಳಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ.

ಬೆಳ್ಳಂಬೆಳಗ್ಗೆ ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ನಂದಿನಿ ಬಡಾವಣೆಯ ಕಂಠೀರವ ನಗರದಲ್ಲಿ ಎರಡನೇ ಹಂತದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ವೇಳೆ ಮಾತನಾಡಿರುವ ಅವರು, ಬಿಜೆಪಿ ಸರ್ಕಾರದಿಂದ ಕ್ಷೇತ್ರದಲ್ಲಿ ಈವರೆಗೆ ಕೈಗೊಂಡಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿದರು. ರಾಜ್ಯ ಹಾಗೂ ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಎಲ್ಲಾ ವರ್ಗದ ಜನರಿಗೂ ಸಾಮಾಜಿಕ ನ್ಯಾಯ ಒದಗಿಸಿದೆ. ಇದು ಕೇವಲ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಹಾಲಕ್ಷ್ಮಿಲೇಔಟ್ ‘ಸಮಗ್ರ ಅಭಿವೃದ್ಧಿಗೆ ಸದಾ ಸಿದ್ಧ’ : ಸಚಿವ ಕೆ. ಗೋಪಾಲಯ್ಯ

ಉತ್ತಮ ಆಸ್ಪತ್ರೆಗಳು, ಕುಡಿಯುವ ನೀರಿನ ಘಟಕ, ನವ ನಂದಿನಿ ಪಾರ್ಕ್, ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ಉದ್ಯಾನವನ ನಿರ್ಮಾಣ ಹಾಗೂ ಕೋವಿಡ್ ಅವಧಿಯಲ್ಲಿ ಆಹಾರ ಕಿಟ್, ಆರೋಗ್ಯ ಕಿಟ್ ರಸ್ತೆ ನಿರ್ಮಾಣ ಹೀಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮುಂದೆ ಇಟ್ಟು ಈ ಬಾರಿ ಮತ್ತೊಮ್ಮೆ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಬಹುಮತದಿಂದ ಗೆಲ್ಲಿಸಬೇಕಾಗಿ ಜನಸಾಮಾನ್ಯರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ನೆಲ ನರೇಂದ್ರಬಾಬು, ಡಾಕ್ಟರ್ ಗಿರೀಶ್ ನಾಶಿ ಮಾಜಿ ಬಿಬಿಎಂಪಿ ಸದಸ್ಯ ರಾಜೇಂದ್ರ ಕುಮಾರ್, ವಾರ್ಡ್ ಅಧ್ಯಕ್ಷ ಲೋಕೇಶ್, ರೇಣುಕಾ ಆರಾಧ್ಯ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES