Wednesday, January 22, 2025

ಕಾಂಗ್ರೆಸ್ 70 ವರ್ಷಗಳಲ್ಲಿ ಕೇವಲ 7 ಏಮ್ಸ್ ನಿರ್ಮಿಸಿದೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಕಾಂಗ್ರೆಸ್ 70 ವರ್ಷಗಳಲ್ಲಿ ಕೇವಲ 7 ಏಮ್ಸ್​ ಆಸ್ಪತ್ರೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕರಿಗೆ ಟಕ್ಕರ್ ಕೊಟ್ಟಿದ್ದಾರೆ.

ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 3 ಪಟ್ಟು ಹೆಚ್ಚಳವಾಗಿದೆ. ಕೇವಲ 7 ವರ್ಷಗಳಲ್ಲಿ 3 ಪಟ್ಟು ಏಮ್ಸ್​ ಆಸ್ಪತ್ರೆಗಳ ನಿರ್ಮಾಣ ಮಾಡಲಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದ 70 ವರ್ಷಗಳಲ್ಲಿ ಕೇವಲ 7 ಏಮ್ಸ್​ ನಿರ್ಮಿಸಿದೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೂತ್​ ಮಟ್ಟದಲ್ಲಿ ಬಿಜೆಪಿಗೆ ಬಲ

ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪು ನಾವೆಲ್ಲರೂ ಸ್ವಾಗತಿಸಬೇಕು. ಆದರೆ, ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರದ ಅಗತ್ಯವಿದೆ. ಬೂತ್​ ಮಟ್ಟದಲ್ಲಿ ಬಿಜೆಪಿ ಬಲಪಡಿಸಬೇಕು. 2014ರ ಮೊದಲು 1 ಮನೆ ನಿರ್ಮಿಸಲು 300 ದಿನ ತೆಗೆದುಕೊಳ್ಳುತ್ತಿದ್ದರು.

ಇದನ್ನೂ ಓದಿ : ‘ರಾಗಾ, ಪ್ರಿಯಾಂಕಾ’ ಪ್ರಚಾರಕ್ಕೆ ಬಂದ್ರೆ ‘ನಮ್ಗೆ ಲಾಭ’ : ಸಿಎಂ ಬೊಮ್ಮಾಯಿ‌

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 100 ದಿನಗಳಲ್ಲಿ ಮನೆಗಳ ನಿರ್ಮಾಣವಾಗುತ್ತಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಡಬಲ್​ ಇಂಜಿನ್​ ಸರ್ಕಾರ ಇರುವ ರಾಜ್ಯಗಳಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಬಡವರಿಗೆ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಕಾಂಗ್ರೆಸ್​ ಸರ್ಕಾರ ಇರುವ ರಾಜ್ಯಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಪ್ರಧಾನಿ ಮೋದಿ ಛೇಡಿಸಿದ್ದಾರೆ.

RELATED ARTICLES

Related Articles

TRENDING ARTICLES