Wednesday, January 22, 2025

ಇಂದು ಚೆನ್ನೈ-ರಾಜಸ್ಥಾನ್ ಮಧ್ಯೆ ಹೈವೋಲ್ಟೇಜ್ ಪಂದ್ಯ : ಮೇಲುಗೈ ಯಾರಿಗೆ?

ಬೆಂಗಳೂರು : ಐಪಿಎಲ್ ನಲ್ಲಿ ಇಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಎಂಎಸ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

ಜೈಪುರ ಕ್ರೀಡಾಂಗಣದಲ್ಲಿ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿದ್ದು, ಪಾಯಿಂಟ್ಸ್ ಟೇಬಲ್ ಅಗ್ರಸ್ಥಾನಕ್ಕಾಗಿ ಕಾದಾಡಲಿವೆ. ಕಳೆದ ಪಂದ್ಯದ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಧೋನಿ ಬಾಯ್ಸ್ ಆತೊರೆಯುತ್ತಿದ್ದಾರೆ.

ಇಂದು ರಾತ್ರಿ 7.30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಇಂದಿನವರೆಗೆ ಎರಡೂ ತಂಡಗಳು 7 ಪಂದ್ಯಗಳನ್ನು ಆಡಿವೆ. ಚೈನ್ನೈ 5 ಪಂದ್ಯಗಳು ಗೆದ್ದು ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ರಾಜಸ್ಥಾನವು ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಮೂರನೇ ಸ್ಥಾನದಲ್ಲಿದೆ.

ಋತು, ಕಾನ್ವೆ, ರಹಾನೆ ಸ್ಫೋಟಕ ಬ್ಯಾಟಿಂಗ್

ಚೆನ್ನೈ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್, ಡೆವೋನ್ ಕಾನ್ವೆ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅನುಭವಿ ಆಟಗಾರ ಅಜಿಂಕ್ಯಾ ರಹಾನೆ ಚೆನ್ನೈ ಪರ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಆಲ್ ರೌಂಡರ್ ಶಿವಂ ದುಬೆ, ರವೀಂದ್ರ ಜಡೇಜಾ ಅಬ್ಬರಿಸುತ್ತಿದ್ದಾರೆ.

ಇದನ್ನೂ ಓದಿ : ತಲಾ ಧೋನಿ ಹೊಸ ಮೈಲುಗಲ್ಲು : ಈ ಸಾಧನೆ ಮಾಡಿದ ಮೊದಲ ನಾಯಕ ಇವರೇ!

ಚೆನ್ನೈ ಸೂಪರ್ ಕಿಂಗ್ಸ್ ತಂಡ

ಮಹೇಂದ್ರ ಸಿಂಗ್ ಧೋನಿ (ನಾಯಕ/ವಿ.ಕೀ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಮಥಿಸಾ ಪತಿರಾನ, ತುಷಾರ್ ದೇಶಪಾಂಡೆ, ಮನೀಶ್ ತೀಕ್ಷಣ

ರಾಜಸ್ಥಾನ್ ರಾಯಲ್ಸ್ ತಂಡ

ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

RELATED ARTICLES

Related Articles

TRENDING ARTICLES