Monday, December 23, 2024

ಕಳೆದ ಬಾರಿಗಿಂತ ‘ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇನೆ’ : ಸಚಿವ ಗೋಪಾಲಯ್ಯ ವಿಶ್ವಾಸ

ಬೆಂಗಳೂರು : ಅಬಕಾರಿ ಸಚಿವ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಇಂದು ಕಮಲಾನಗರ ಸುತ್ತಮುತ್ತಲ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು.

ನೂರಾರು ಬೆಂಬಲಿಗರ ಜತೆ ಕಸ್ತೂರಿ ಬಡಾವಣೆಯಲ್ಲಿ ಪಾದಯಾತ್ರೆ ನಡೆಸಿದ ಸಚಿವ ಕೆ.ಗೋಪಾಲಯ್ಯಗೆ ಅಪೂರ್ವ ಜನಬೆಂಬಲ ವ್ಯಕ್ತವಾಯಿತು. ಇದೇ ಕ್ಷೇತ್ರದ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು, ಗೋಪಾಲಯ್ಯಗೆ ಸಾಥ್ ಕೊಟ್ಟರು.

ಈ ಸಂದರ್ಭದಲ್ಲಿ ಪವರ್ ಟಿವಿಯೊಂದಿಗೆ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ. ತಾವು ಇಲ್ಲಿನ ಮತದಾರರಿಗೆ ಸದಾ ಲಭ್ಯರಿದ್ದು, ಜನ ಸೇವೆ ಮಾಡಿದ್ದೇವೆ. ಹಾಗಾಗಿ ಈ ಬಾರಿ ಕಳೆದ ಬಾರಿಗಿಂತ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಮತ್ತೊಮ್ಮೆ ಹೆಚ್ಚು ‘ಬಹುಮತದಿಂದ ನನ್ನನ್ನು ಗೆಲ್ಲಿಸಿ’ : ಸಚಿವ ಕೆ.ಗೋಪಾಲಯ್ಯ

ನೆ.ಲ ನರೇಂದ್ರ ಬಾಬು ಮಾತನಾಡಿ, ತಾವು ಇದೇ ಕ್ಷೇತ್ರದಲ್ಲಿ ಮೊದಲು ಶಾಸಕರಾಗಿದ್ದು, ಮಹಾಲಕ್ಷ್ಮಿ ಲೇಔಟ್ ನಲ್ಲಿ ಅಭಿವೃದ್ದಿ ಕಾರ್ಯಕ್ರಮಗಳನ್ನು ಆರಂಭಿಸಿದ್ದೆ. ಅದನ್ನು ಗೋಪಾಲಯ್ಯನವರು ಮುಂದುವರಿಸಿ, ಇಡೀ ಕ್ಷೇತ್ರವನ್ನು ಅಭಿವೃದ್ದಿ ಮಾಡಿದ್ದಾರೆ ಎಂದು ಗೋಪಾಲಯ್ಯರನ್ನು ಹಾಡಿ ಹೊಗಳಿದರು.

ಕೋವಿಡ್ ಸಂದರ್ಭದಲ್ಲಂತೂ ಇಡೀ ರಾಜ್ಯದಲ್ಲೇ ಪ್ರಥಮ ಎನ್ನುವ ಕಾರ್ಯಗಳನ್ನು ಈ ಕ್ಷೇತ್ರದಲ್ಲಿ ಕೈಗೊಳ್ಳಲಾಗಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸಹ ಹಲವಾರು ಬಾರಿ ಕ್ಷೇತ್ರಕ್ಕೆ ಭೇಟಿ ಕೊಟ್ಟು, ಅಭಿವೃದ್ದಿ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES