Monday, December 23, 2024

ಬಿಜೆಪಿ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆ : ಸಚಿವ ಗೋಪಾಲಯ್ಯ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಬಿಜೆಪಿ ಪಕ್ಷ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆ ಎಂಬ ಸಂಪೂರ್ಣವಾದ ವಿಶ್ವಾಸವಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಕ್ತಿ ಗಣಪತಿ ನಗರದ 74ನೇ ವಾರ್ಡಿನಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಅವರು ಮಾತನಾಡಿದರು. ಕೋವಿಡ್ ನಂತಹ ಮಹಾಮಾರಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಬಿಜೆಪಿ ಸರ್ಕಾರವು ಜನಸಾಮಾನ್ಯರಿಗೆ ಆಕ್ಸಿಜನ್ ಹಾಗೂ ಉಚಿತ ಲಸಿಕೆಯನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಮೂರು ಬಾರಿ ಶಾಸಕನಾಗಿ, ಸಚಿವನಾಗಿ ತಮ್ಮೆಲ್ಲರ ಆಶೀರ್ವಾದ ಹಾಗೂ ಹೆಚ್ಚಿನ ಸಹಕಾರದಿಂದ ಈ ಸ್ಥಾನಕ್ಕೆ ಬಂದಿರುತ್ತೇನೆ. ಇದಕ್ಕೆ ಕಾರಣರಾದ ತಮ್ಮೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಕ್ಷೇತ್ರದ ಜನರು ಹೆಚ್ಚಿನ ಬಹುಮತದೊಂದಿಗೆ ಮತವನ್ನು ನೀಡಿ ಆಶೀರ್ವಾದ ಮಾಡಬೇಕು ಎಂದು ಕೆ.ಗೋಪಾಲಯ್ಯ ಮನವಿ ಮಾಡಿದರು.

ಇದನ್ನೂ ಓದಿ : ಮುಂದಿನ 5 ವರ್ಷ ದೇಶದ ಪಾಲಿಗೆ ‘ಅಮೃತ ಕಾಲ’ : ಪ್ರಧಾನಿ ಮೋದಿ

ಮತ್ತಷ್ಟು ಅಭಿವೃದ್ಧಿಗೆ ಅವಕಾಶ ನೀಡಿ

ಕ್ಷೇತ್ರದಲ್ಲಿ ಕುಡಿಯುವ ನೀರಿನ ಘಟಕ, ನವ ನಂದಿನಿ ಪಾರ್ಕ್, ಆರೋಗ್ಯದ ಕಾಳಜಿಯಿಂದ ಉತ್ತಮ ಆಸ್ಪತ್ರೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ನವ ನಂದಿನಿ ಉದ್ಯಾನವನ ನಿರ್ಮಾಣ ಹಾಗೂ ಕೋವಿಡ್ ಅವಧಿಯಲ್ಲಿ  350ಕ್ಕೂ ಹೆಚ್ಚಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿ ಕ್ಷೇತ್ರದ ಜನತೆಯ ಉಳಿವಿಗಾಗಿ ಶ್ರಮವಹಿಸಿ ಕಾರ್ಯನಿರ್ವಹಣೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಕ್ಷೇತ್ರವನ್ನು ಇನ್ನೂ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ನೆಲ ನರೇಂದ್ರಬಾಬು, ಕ್ಷೇತ್ರದ ಚುನಾವಣೆ ಉಸ್ತುವಾರಿ ಇಮಾನ್, ಮಾಜಿ ಬಿಬಿಎಂಪಿ ಸದಸ್ಯ ಪದ್ಮಾವತಿ ಶ್ರೀನಿವಾಸ್, ಜಯಸಿಂಹ,ಬಿ.ಡಿ ಶ್ರೀನಿವಾಸ್, ನಿಸರ್ಗ ಜಗದೀಶ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES