Thursday, December 26, 2024

‘ಸಿದ್ದರಾಮಯ್ಯ ಸರ್ಕಾರ’ ರಾಜ್ಯದ ಅತ್ಯಂತ ಭ್ರಷ್ಟ ಸರ್ಕಾರ : ಸಿಎಂ ಬೊಮ್ಮಾಯಿ

ಬೆಂಗಳೂರು : ಸಿದ್ದರಾಮಯ್ಯ ಸರ್ಕಾರ ರಾಜ್ಯದ ಅತ್ಯಂತ ಭ್ರಷ್ಟ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬೀದರ್ ಜಿಲ್ಲೆ ಹುಮ್ನಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಪಾಲ್ಗೊಂಡು ಅವರು ಮಾತನಾಡಿದರು.

ಕಾಂಗ್ರೆಸ್ ನಾಯಕರು ಲಿಂಗಾಯತರು ಭ್ರಷ್ಟರು ಅಂತ ಹೇಳಿದರು. ನರೇಂದ್ರ ನೋದಿ ಅವರ ಬಗ್ಗೆ ಖರ್ಗೆ ಅವರು ಆರೋಪಿಸಿದ್ದಾರೆ. ನರೇಂದ್ರ ಮೋದಿ ಅವರು ಅಂದರೆ ಕಾಂಗ್ರೆಸ್ ನವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಇದನ್ನೂ ಓದಿ : ‘ಕೈ’ ಗ್ಯಾರೆಂಟಿ ಮೇ10ರ ಬಳಿಕ ಅದು ‘ಗಳಗಂಟಿ’ : ಸಿಎಂ ಬೊಮ್ಮಾಯಿ ಲೇವಡಿ

ವಿಶ್ವಮಾನವ ಬಸವಣ್ಣ ಅವರ ನಾಡಲ್ಲಿ ವಿಶ್ವ ನಾಯಕ ನರೇಂದ್ರ ಮೋದಿ ಯವರಿಗೆ ಸ್ವಾಗತ. ಪ್ರಜಾಪ್ರಭುತ್ವದ ಮೊದಲನೇ ಕರ್ತವ್ಯ ಎಲ್ಲರನ್ನೂ ಸಮಾನವಾಗಿ ನೋಡುವುದು. ಕಾಂಗ್ರೆಸ್ ಇಷ್ಟು ವರ್ಷ ಅದನ್ನು ಮಾಡಿಲ್ಲ. ನಾವು ಎಲ್ಲ ಸಮುದಾಯಗಳನ್ನು ಸಮಾನವಾಗಿ ನೋಡುತ್ತಿದ್ದೇವೆ ಎಂದು ತಿಳಿಸಿದರು.

ಇಡೀ ದೇಶದ ಬಡವರಿಗೆ 10 ಕೆಜಿ ಅಕ್ಕಿ

ನಮ್ಮ ಪ್ರಧಾನ ಮಂತ್ರಿ ಇಡೀ ದೇಶದ ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತಿದ್ದಾರೆ‌. ಕರ್ನಾಟಕದಲ್ಲಿ 13 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದಾರೆ‌. ಜಲ ಜೀವನ್ ಮಿಷನ್ ಅಡಿಯಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 54 ಲಕ್ಷ ರೈತರಿಗೆ 16,000 ಕೋಟಿ ನೀಡಿದ್ದೇವೆ‌ ಎಂದು ಹೇಳಿದರು.

ರಾಜ್ಯದಲ್ಲಿ ಟೆಕ್ಸ್ ಟೈಲ್ ಪಾರ್ಕ್ ನೀಡಿದ್ದಾರೆ. ಇದರಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ. ಬೀದರ್ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಕಳುಹಿಸಿಕೊಡಬೇಕು ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದರು.

RELATED ARTICLES

Related Articles

TRENDING ARTICLES