Monday, December 23, 2024

ಕಾಂಗ್ರೆಸ್ ನ ‘ಗುಜರಿ ಇಂಜಿನ್’ನಿಂದ ಅಭಿವೃದ್ಧಿ ಅಸಾಧ್ಯ : ಪ್ರಧಾನಿ ಮೋದಿ

ಬೆಂಗಳೂರು : ಕಾಂಗ್ರೆಸ್​ನ ಗುಜರಿ ಇಂಜಿನ್​​ನಿಂದ ಕರ್ನಾಟಕದ ಅಭಿವೃದ್ಧಿ ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

‘ಚಿನ್ನದ ನಾಡು ಕೋಲಾರ ಜನತೆಗೆ ನನ್ನ ನಮಸ್ಕಾರಗಳು’ ಎಂದು ಕೋಲಾರದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಕನ್ನಡದಲ್ಲೇ ಪ್ರಧಾನಿ ಮೋದಿ ಭಾಷಣ ಆರಂಭಿಸಿದರು.

ಡಬಲ್​ ಇಂಜಿನ್​ ಸರ್ಕಾರವಿದ್ದರೇ ಸಾಕಷ್ಟು ಅಭಿವೃದ್ದಿಯಾಗುತ್ತದೆ. ಕೇಂದ್ರದಲ್ಲಿರುವ ಪ್ರಬಲವಾದ ಬಿಜೆಪಿ ಇಂಜಿನ್​ ತರಹ ಕರ್ನಾಟಕದಲ್ಲೂ ಗಟ್ಟಿಯಾದ ಇಂಜಿನ್​ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

ಕಾಂಗ್ರೆಸ್‌ ಜೆಡಿಎಸ್‌ ನಿದ್ದೆಗೆಡಿಸಿದೆ

ಕೋಲಾರದಲ್ಲಿ ಇಷ್ಟು ಪ್ರಮಾಣದಲ್ಲಿ ಜನರು ಸೇರಿರುವುದು ಕಾಂಗ್ರೆಸ್‌ ಜೆಡಿಎಸ್‌ ಪಕ್ಷಗಳ ನಿದ್ದೆಗೆಡಿಸಿದೆ. ಈ ಬಾರಿ ಕಾಂಗ್ರೆಸ್‌ ಜೆಡಿಎಸ್‌ ಎರಡು ಪಕ್ಷಗಳು ಕ್ಲೀನ್‌ ಬೋಲ್ಡ್‌ ಆಗಲಿವೆ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದರು.

ಇದನ್ನೂ ಓದಿ : ‘ಸಿದ್ದರಾಮಯ್ಯ ಸರ್ಕಾರ’ ರಾಜ್ಯದ ಅತ್ಯಂತ ಭ್ರಷ್ಟ ಸರ್ಕಾರ : ಸಿಎಂ ಬೊಮ್ಮಾಯಿ

ಪಾರದರ್ಶಕ ಆಡಳಿತ ಅಸಾಧ್ಯ

ಅಸ್ಥಿರ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ, ನಷ್ಟವೇ ಜಾಸ್ತಿ. ಅಸ್ಥಿರ ಸರ್ಕಾರಗಳಿಂದ ಉತ್ತಮ ಕಾರ್ಯಗಳು ಆಗುವುದಿಲ್ಲ. ಬದಲಿಗೆ ಭ್ರಷ್ಟಾಚಾರ ಹೆಚ್ಚಳವಾಗುವುದಕ್ಕೆ ಕಾರಣವಾಗುತ್ತೆ. ಜೆಡಿಎಸ್‌ ಕಾಂಗ್ರೆಸ್‌ನಿಂದ ಪಾರದರ್ಶಕ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.

ಇದು ಕೇವಲ ಮುಂದಿನ 5 ವರ್ಷಗಳಿಗೆ ಎಂಎಲ್‌ಎ, ಮಂತ್ರಿ, ಮುಖ್ಯಮಂತ್ರಿಗಳ ಆಯ್ಕೆಗೆ ನಡೆಯುವ ಚುನಾವಣೆಯಲ್ಲ. ಮುಂದಿನ 25 ವರ್ಷಗಳ ಕಾಲ ಕರ್ನಾಟಕದ ಅಭಿವೃದ್ಧಿಯ ಪಥದಲ್ಲಿ ಸಾಗಿ ಭಾರತದ ಭವಿಷ್ಯ ನಿರ್ಧರಿಸುವ ಚುನಾವಣೆ ಎಂದು ಪ್ರಧಾನಿ ಮೋದಿ ಹೇಳಿದರು.

ವಿಶ್ವದಲ್ಲಿ ಭಾರತಕ್ಕೆ ತನ್ನದೆಯಾದ ವರ್ಚಸ್ಸು ಇದೆ. ಕೊರೊನಾ ಕಾಲದಲ್ಲೂ ಆರ್ಥಿಕವಾಗಿ ಸದೃಢತೆ ಹೊಂದುವ ಮೂಲಕ ಪ್ರಭಾವಿ ದೇಶವಾಗಿ ಹೊರ ಹೊಮ್ಮಿದೆ. ಬಿಜೆಪಿ ಭಾರತದ ಸಾಮರ್ಥ್ಯವನ್ನು ವಿಶ್ವಕ್ಕೆ ಪರಿಚಯಿಸುತ್ತಿದೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES