Sunday, December 8, 2024

ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ : ‘ಪಾಂಡ್ಯ ಪಡೆ’ ಲೆಕ್ಕಾಚಾರ ಉಲ್ಟಾ ಮಾಡ್ತಾರಾ ವಾರ್ನರ್ ಬಾಯ್ಸ್

ಬೆಂಗಳೂರು : ಐಪಿಎಲ್ ನಲ್ಲಿ ಇಂದು ನಡೆಯಲಿರುವ 44ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡದ ವಿರುದ್ಧ ಸೆಣಸಲಿದೆ. ಟಾಸ್ ಗೆದ್ದ ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಗೆ ಗೆಲುವು ಅನಿವಾರ್ಯವಾಗಿದೆ. ಗುಜರಾತ್ ಟೈಟಾನ್ಸ್ ಆಡಿರುವ 8 ಪಂದ್ಯಗಳಲ್ಲಿ ಆರು ಪಂದ್ಯ ಗೆದ್ದು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಪಂದ್ಯಗಳಲ್ಲಿ ಕೇವಲ ಎರಡು ಪಂದ್ಯ ಗೆದ್ದು ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್ ಈ ಪಂದ್ಯವನ್ನು ಗೆದ್ದು ಪ್ಲೇ-ಆಫ್‌ಗೆ ಮತ್ತಷ್ಟು ಹತ್ತಿರವಾಗುವ ಲೆಕ್ಕಾಚಾರದಲ್ಲಿದೆ. ಮತ್ತೊಂದೆಡೆ, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಲಿ ಚಾಂಪಿಯನ್ನರ ಲೆಕ್ಕಾಚಾರವನ್ನು ಉಲ್ಟಾ ಮಾಡಲು ಪ್ಲಾನ್ ಮಾಡುತ್ತಿದೆ.

ಇದನ್ನೂ ಓದಿ : ಜಡೇಜಾ ಹೊಸ ದಾಖಲೆ : ಸಾಧನೆ ಮಾಡಿದ 8ನೇ ಕ್ರಿಕೆಟಿಗ ಜಡ್ಡು

ಗುಜರಾತ್ ಟೈಟಾನ್ಸ್ ತಂಡ  

ಹಾರ್ದಿಕ್ ಪಾಂಡ್ಯ (ನಾಯಕ), ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಡೇವಿಡ್ ಮಿಲ್ಲರ್, ಸಾಯಿ ಸುದರ್ಶನ್, ವಿಜಯ್ ಶಂಕರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಅಭಿನವ್ ಮನೋಹರ್

ಡೆಲ್ಲಿ ಕ್ಯಾಪಿಟಲ್ಸ್ ತಂಡ

ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮನೀಶ್ ಪಾಂಡೆ, ಯಶ್ ಧುಲ್, ರಿಲೀ ರೊಸೊವ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಅಮನ್ ಹಕೀಮ್ ಖಾನ್ ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಇಶಾಂತ್ ಶರ್ಮಾ

RELATED ARTICLES

Related Articles

TRENDING ARTICLES