ಬೆಂಗಳೂರು : ಇಂದು ಬಿಡುಗಡೆಯಾದ ಪ್ರಣಾಳಿಕೆಯಿಂದ ಕಾಂಗ್ರೆಸ್ ಗೆ ನೂರಾನೆ ಬಲ ಬಂದಂತಾಗಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಾಲ್ ಬಾಗ್ ನ ಸಿದ್ದಾಪುರ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇವರಾಜ್ ಇಂದು ಚುನಾವಣಾ ಪ್ರಚಾರ ನಡೆಸಿದರು.
ಪ್ರಚಾರದ ವೇಳೆ ಪವರ್ ಟಿವಿಯೊಂದಿಗೆ ಮಾತನಾಡಿರುವ ಅವರು,’ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’ ಘೋಷ ವಾಕ್ಯದೊಂದಿಗೆ ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿದೆ. ಕರ್ನಾಟಕವನ್ನು ಪುನರ್ನಿರ್ಮಿಸಲು ನಾವು ಸಿದ್ಧವಾಗಿದ್ದೇವೆ ಎಂದು ಹೇಳಿದರು.
ಇಡೀ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿರುವ ದೇವರಾಜ್ ಗೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಅಭೂತಪೊರ್ವ ಜನಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ಕಾಂಗ್ರೆಸ್ ಗೆ ತಮ್ಮ ಮತ ಎಂದು ಮತದಾರರು ಅಭಯ ನೀಡುತ್ತಿರುವುದರಿಂದ ದೇವರಾಜ್ ರ ಉತ್ಸಾಹ ಮತ್ತಷ್ಟು ಹೆಚ್ಚಾಗಿದೆ.
ಇದನ್ನೂ ಓದಿ : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ‘ಭರಪೂರ ಭರವಸೆ’ : ಹೀಗಿವೆ ಪ್ರಣಾಳಿಕೆ ಮುಖ್ಯಾಂಶಗಳು
ದೇವರಾಜ್ ಪರ ಡಿಕೆಶಿ ಪ್ರಚಾರ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಿನ್ನೆ ಚಿಕ್ಕಪೇಟೆ ಕ್ಷೇತ್ರದ ಸುಂಕೇನಹಳ್ಳಿ ವಾರ್ಡ್ ನ ಉಮಾ ಟಾಕೀಸ್ ಬಳಿ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇವರಾಜ್ ಅವರ ಪರವಾಗಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ಉದಯಶಂಕರ್, ಮುಖಂಡರಾದ ಮೋಹನ್, ಕೆ.ಎಂ.ನಾಗರಾಜ್ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕನ್ನಿಕಾಪರಮೇಶ್ವರಿಗೆ ವಿಶೇಷ ಪೂಜೆ
ಪ್ರಚಾರ ಕಾರ್ಯಕ್ರಮಕ್ಕೂ ಮುನ್ನ ಆರ್.ವಿ.ದೇವರಾಜ್ ಅವರು ಮಾವಳ್ಳಿಯ ಸುಶೀಲ ರೋಡ್ ನಲ್ಲಿರುವ ಕನ್ನಿಕಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದರು. ನಾಡಿನ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.