Wednesday, January 22, 2025

ಇಂದು ನಟ ದರ್ಶನ್ ಪ್ರಚಾರ ಎಲ್ಲೆಲ್ಲಿ? : ಸಚಿವ ಸುಧಾಕರ್ ಪರ ಮತ ಬೇಟೆ

ಬೆಂಗಳೂರು : ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಸ್ಯಾಂಡಲ್ ವುಡ್ ನ ಅನೇಕ ಚಿತ್ರ ನಟ, ನಟಿಯರು ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಪ್ರಚಾರ ನಡೆಸುತ್ತಿದ್ದಾರೆ.

ಇಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಟ ದರ್ಶನ್ ತೂಗುದೀಪ ಅವರು ರೋಡ್ ಶೋ ನಡೆಸುವ ಮೂಲಕ ಸಚಿವ ಸುಧಾಕರ್ ಅವರ ಪರ ಮತಯಾಚನೆ ಮಾಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರ ನಗರದ ಶ್ರೀ ಮರಳುಸಿದ್ದೇಶ್ವರ ದೇವಸ್ಥಾನ, ಶಿಡ್ಲಘಟ್ಟ ವೃತ್ತ, ಬಲಮುರಿ ವೃತ್ತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೋಡ್ ಶೋ ನಡೆಸಲಿದ್ದಾರೆ. ಇನ್ನೂ ಡಾ.ಕೆ ಸುಧಾಕರ್ ಪೆರೇಸಂದ್ರ ಬ್ರಿಜ್, ಮಂಚನಬೆಲೆ ಪಂಚಾಯತಿ ಮತ್ತು ನಾಯನಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ : ಇಂದು ‘ಕಿಚ್ಚ ಸುದೀಪ್’ ರೋಡ್ ಶೋ ಎಲ್ಲೆಲ್ಲಿ? ಇಲ್ಲಿದೆ ವೇಳಾಪಟ್ಟಿ

ತೆಲುಗು ನಟ ಬ್ರಹ್ಮಾನಂದಮ್ ಮತ ಬೇಟೆ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿ ತಾಲ್ಲೂಕಿನಲ್ಲಿ ಇಂದು ತೆಲುಗು‌ ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಮ್ ಅವರು ಬಿಜೆಪಿ ಹಾಗೂ ಸಚಿವ ಡಾ.ಕೆ ಸುಧಾಕರ್ ಅವರ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಕಾಂಗ್ರೆಸ್ ಗೆ ಸೋಲುವ ಮುನ್ಸೂಚನೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಸೋಲುವ ಮುನ್ಸೂಚನೆ ಸಿಕ್ಕಿದೆ ಎಂದು ಸಚಿವ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ. ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನಕ್ಕೆ ಮುಂದಾಗಿರುವ ಜನವಿರೋಧಿ ಕಾಂಗ್ರೆಸ್ ಪಕ್ಷವು ಭಜರಂಗದಳ ಸಂಘಟನೆಯನ್ನು ನಿಷೇಧ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಹನುಮ ಜನಿಸಿದ ನಮ್ಮ‌ ನಾಡಿನ ಭಜರಂಗಿಗಳು ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES