Thursday, December 26, 2024

‘ಹನುಮನೆಂದರೆ ಶಾಂತಿ, ಜಗವ ಕಾಯೋ ಕಾಂತಿ’ : ಹನುಮನಾಮ ಸ್ಮರಿಸಿದ ಡಿಕೆಶಿ

ಬೆಂಗಳೂರು : ಬಿಜೆಪಿಯವರು ಒಂದಾದ್ರೂ ಆಂಜನೇಯ ದೇಗುಲ ಕಟ್ಟಿದ್ದಾರಾ?  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಫುಲ್ ಗರಂ ಆಗಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ‌ ದೇವಸ್ಥಾ‌ನದಲ್ಲಿ ಚಾಮುಂಡಿ ದರ್ಶನ ಪಡೆದ ಬಳಿಕ ಡಿ.ಕೆ ಶಿವಕುಮಾರ್ ಅವರು ರಾಮಭಕ್ತ ಹನುಮನಿಗೆ ಪೂಜೆ ಸಲ್ಲಿಸಿದ್ದಾರೆ. ಹನುಮನೆಂದರೆ ಶಕ್ತಿ,‌ ಹನುಮನೆಂದರೆ ಶಾಂತಿ,‌ ಹನುಮನೆಂದರೆ ಜಗವ ಕಾಯೋ ಕಾಂತಿ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಬಗ್ಗೆ ಉಲ್ಲೇಖದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಯವರಿಗೆ ಗಾಬರಿ ಆಗಿದೆ ಎಂದು ಟಕ್ಕರ್ ಕೊಟ್ಟಿದ್ದಾರೆ.

ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸ ಇಲ್ವಾ? ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಹನುಮಂತ ಹೆಸರು ಇಟ್ಟು ಕೊಂಡವರೆಲ್ಲಾ ಆಂಜನೇಯ ಆಗಲ್ಲ. ಬಜರಂಗದಳದವರು ನೈತಿಕ ಪೊಲೀಸ್​​ಗಿರಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ

ಆಂಜನೇಯ ದೇಗುಲ ಅಭಿವೃದ್ಧಿಗೆ ಒತ್ತು

ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಯವರು ಒಂದಾದ್ರೂ ಆಂಜನೇಯ ದೇವಸ್ಥಾನ ಕಟ್ಟಿದ್ದಾರಾ? ರಾಜ್ಯದಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಅಧಿಕಾರಕ್ಕೆ ಬಂದರೆ ಆಂಜನೇಯ ದೇವಸ್ಥಾನ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಅಂಜನಾದ್ರಿ ಅಭಿವೃದ್ಧಿಗೆ ವಿಶೇಷ ಮಂಡಳಿ

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಿಶೇಷ ಮಂಡಳಿ ಮಾಡುತ್ತೇವೆ. ಯುವಕರಲ್ಲಿ ಆಂಜನೇಯ ಸಿದ್ಧಾಂತ ಬೆಳೆಸಲು ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಾಲೂಕಿನಲ್ಲೂ ಆಂಜನೇಯನ ಹೆಸರಿನಲ್ಲಿ ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES