Monday, December 23, 2024

ಸೋಮಶೇಖರ್ ಯಾರು? ಏನು? ಅಂತಾ ಜನರಿಗೆ ಗೊತ್ತಿದೆ : ಎಸ್.ಟಿ.ಸೋಮಶೇಖರ್ ಗುಡುಗು

ಬೆಂಗಳೂರು : ಸೋಮಶೇಖರ್ ಯಾರು? ಏನು? ಎಂಬುದು ಕ್ಷೇತ್ರದ ಜನತೆಗೆ ಗೊತ್ತಿದೆ. ಯಾವ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ನೋಡಿ ನನಗೆ ಮತ ನೀಡಲಿದ್ದಾರೆ ಎಂದು ಸಚಿವ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

ಅಗರ, ಕಗ್ಗಲಿಪುರ, ತರಳು, ಸೋಮನಹಳ್ಳಿ, ನೆಲಗುಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹಸಚಿವರಾದ ಅಮಿತ್ ಶಾ ಅವರು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಯಾರು ಏನೇ ಅಪಪ್ರಚಾರ ಮಾಡಿದರೂ ಕ್ಷೇತ್ರದ ಜನತೆ ಅದನ್ನು ನಂಬುವುದಿಲ್ಲ ಎಂದು ವಿರೋಧ ಪಕ್ಷಗಳಿಗೆ ಟಕ್ಕರ್ ಕೊಟ್ಟರು.

ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತೆ

ಈ ಬಾರಿ ರಾಜ್ಯದ ಜನತೆ ಬಿಜೆಪಿಗೆ ಜನಾಶೀರ್ವಾದ ಮಾಡಲಿದ್ದು ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮುಂದಿನ ದಿನಗಳಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಿದ್ದೇನೆ. ಯಶವಂತಪುರದ ಕಡೆ ಇಡೀ ರಾಜ್ಯ ತಿರುಗಿನೋಡುವಂತೆ ಮಾಡುತ್ತೇನೆ. ನಾನು ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಮತಯಾಚಿಸುತ್ತಿದ್ದೇನೆ. ಎಲ್ಲಾ ಕಡೆ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂಬುದಕ್ಕೆ ಇಲ್ಲಿ ಸೇರಿರುವ ಜನಸ್ತೋಮವೇ ಸಾಕ್ಷಿ ಎಂದು ಎಸ್.ಟಿ ಸೋಮಶೇಖರ್ ಹೇಳಿದರು.

ಇದನ್ನೂ ಓದಿ : ಮನುಷ್ಯತ್ವ ಇರುವವರು ಕಷ್ಟಕ್ಕೆ ಸ್ಪಂದಿಸುತ್ತಾರೆ : ಎಸ್.ಟಿ ಸೋಮಶೇಖರ್

ಲ್ಯಾಂಡ್ ಮಾಫಿಯಾಗೆ ಕಡಿವಾಣ

ಕೋವಿಡ್ ನಿಂದಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಕೊಂಚ ಹಿನ್ನಡೆಯಾಯಿತು. ಆದರೆ ಕ್ಷೇತ್ರದ ಜನತೆಯ ಜೀವ ಉಳಿಸುವುದರ ಜೊತೆಗೆ ಜೀವನ ನಡೆಸಲು ಕೆಲವು ಕಾರ್ಯಕ್ರಮಗಳನ್ನು ಆಯೋಜಿಸಿ ನೆರವು ನೀಡಲಾಗಿದೆ. ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ, ಲ್ಯಾಂಡ್ ಮಾಫಿಯಾಗೆ ಕಡಿವಾಣ ಹಾಕಲಾಗಿದೆ ಎಂದು ತಿಳಿಸಿದರು.

ಯಶವಂತಪುರವನ್ನು ನಂ.1 ಮಾಡ್ತೀನಿ

ಯಶವಂತಪುರ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದ್ದು ಅಭಿವೃದ್ಧಿ ಪರ್ವ ಶುರುವಾಗಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರ ಅಭಿವೃದ್ಧಿಯಲ್ಲಿ ನಂಬರ್ ಒನ್ ಆಗಲಿದೆ ಎಂದು ಎಸ್.ಟಿ.ಸೋಮಶೇಖರ್ ಅವರು ಭರವಸೆ ನೀಡಿದರು.

17 ಗ್ರಾಮ ಪಂಚಾಯತಿ, 7 ಬಿಬಿಎಂಪಿ ವಾರ್ಡ್ ಗಳಿರುವ ಈ ಕ್ಷೇತ್ರ ಗ್ರಾಮೀಣ ಮತ್ತು ನಗರ ಪ್ರದೇಶವನ್ನು ಒಳಗೊಂಡಿದೆ. ಶರವೇಗದಲ್ಲಿ ಬೆಳೆಯುತ್ತಿರುವ ಈ ಕ್ಷೇತ್ರದಲ್ಲಿ ಈಗಾಗಲೇ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಭಾಗದ ಶಾಲೆ, ಆಸ್ಪತ್ರೆಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದು ಹೇಳಿದರು.

RELATED ARTICLES

Related Articles

TRENDING ARTICLES