Friday, December 27, 2024

ಸಚಿವ ಸುಧಾಕರ್ ಪರ ಕಿಚ್ಚ ಸುದೀಪ್ ರೋಡ್ ಶೋ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ನಡುವೆ ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11.30ರಿಂದ ಶಿಡ್ಲಘಟ್ಟದ ಬುರುಡಗುಂಟೆ, ದಿಬೂರಹಳ್ಳಿಯಲ್ಲಿ ಸೀಕಲ್ ರಾಮಚಂದ್ರಗೌಡ ಪರ ಪ್ರಚಾರ ರೋಡ್ ಶೋ ನಡೆಸಲಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ರೋಡ್ ಶೋಗೆ ಕೌಂಟ್ ಡೌನ್

ಬಳಿಕ ಸಂಜೆ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪರ ರೋಡ್ ಶೋ ನಡೆಸಿ ಮತ ಬೇಟೆಯಾಡಲಿದ್ದಾರೆ. ಸಂಜೆ 4 ಗಂಟೆಗೆ ಮಂಚೇನಹಳ್ಳಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಸುದೀಪ್ ಭಾಗಿಯಾಗಲಿದ್ದಾರೆ. ನಂತರ ಚಿಕ್ಕಬಳ್ಳಾಪುರ ನಗರದಲ್ಲಿ ಸಂಜೆ 5.30ಕ್ಕೆ ರೋಡ್ ಶೋ ನಡೆಯಲಿದೆ. ಇನ್ನೂ, ನಿನ್ನೆ ಚಾಮರಾಜನಗರದಲ್ಲಿ ಸಚಿವ ಸೋಮಣ್ಣ ಪರ ನಟ ಸುದೀಪ್ ಅವರು ಪ್ರಚಾರ ನಡೆಸಿದ್ದರು.

50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು

ಡಾ.ಕೆ.ಸುಧಾಕರ್ ಮಾತನಾಡಿ, ಚಿಕ್ಕಬಳ್ಳಾಪುರದಲ್ಲಿ ಕಳೆದ ಬಾರಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲವು ಸಾಧಿಸಿದ್ದೆವು. ಈ ಬಾರಿ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು. ಚಿಕ್ಕಬಳ್ಳಾಪುರ ಕ್ಷೇತ್ರದ ಇನ್ನಷ್ಟು ಅಭಿವೃದ್ಧಿ ಕೆಲಸಗಳು ಮಾಡಬೇಕಾದರೆ‌, ಈ ಬಾರಿ ನೀವು ನನಗೆ ಮತನೀಡಿ ಗೆಲ್ಲಿಸಬೇಕು ಎಂದು ಮತಯಾಚನೆ ಮಾಡಿದರು.

ಇನ್ನು ಕ್ಷೇತ್ರದಲ್ಲಿ ಸ್ಯಾಂಡಲ್ ವುಡ್ ನಟ ನಟಿಯರು ಕೂಡ ಬೀಡು ಬಿಟ್ಟಿದ್ದು ಸುಧಾಕರ್ ಗೆ ಮತ ನೀಡುವಂತೆ ಪ್ರಚಾರ ಮಾಡುತ್ತಿದ್ದಾರೆ. ಇಂದು ನಟಿ ಅನುಪ್ರಭಾಕರ್, ನಟರಾದ ದಿಗಂತ್, ಭುವನ್ ಮನೆ ಮನೆಗೆ ತೆರಳಿ ಸುಧಾಕರ್ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ತಿಳಿಸಿ, ಈ ಬಾರಿ ಸುಧಾಕರ್ ಗೆ ಮತ ನೀಡುವಂತೆ ಮತಯಾಚನೆ ಮಾಡಿದರು.

RELATED ARTICLES

Related Articles

TRENDING ARTICLES