Monday, December 23, 2024

‘ಶಿವಣ್ಣ, ಕರ್ನಾಟಕಕ್ಕೆ ನಿಮ್ಮ ಕೊಡುಗೆ’ ಏನು? : ಶಿವರಾಜ್ ಕುಮಾರ್ ಗೆ ಸಂಬರಗಿ 10 ಪ್ರಶ್ನೆ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಹ್ಯಾಟ್ರಿಕ್ ಹೀರೋ ನಟ ಶಿವರಾಜ್‌ ಕುಮಾರ್‌ ಅವರಿಗೆ ಪ್ರಶಾಂತ್ ಸಂಬರಗಿ ಸಾಮಾಜಿಕ ಜಾಲತಾಣದಲ್ಲಿ 10 ಪ್ರಶ್ನೆಗಳನ್ನು ಕೇಳಿದ್ದಾರೆ.

ನೀವೇ ಹಿಂದುವಾಗಿ ಭಜರಂಗಿ ಹೆಸರಿನ ಸಿನಿಮಾದಲ್ಲಿ ನಟಿಸಿದ್ದೀರಿ. ಕಾಂಗ್ರೆಸ್ ಪಕ್ಷದವರು ಬಜರಂಗದಳದ ನಿಷೇಧದ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ್ದಾರೆ. ಇದರ ಬಗ್ಗೆ ತಮ್ಮ ನಿಲುವು ಏನು? ಎಂದು ಪ್ರಶ್ನಿಸಿದ್ದಾರೆ.

ವರನಟ ಡಾ.ರಾಜ್ ಕುಮಾರ್ ನಮ್ಮ ಆರಾಧ್ಯ ದೈವ. ರಾಜಕೀಯದಿಂದ ದೂರವಾಗಿದ್ದರು. ಅವರ ಕನ್ನಡ ಪರ ಹೋರಾಟ ಎಲ್ಲರಿಗೂ ಗೊತ್ತಿರುವ ವಿಚಾರ, ಅವರ ಮಗನಾಗಿ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು? ಎಂದು ಪ್ರಶಾಂತ್ ಸಂಬರಗಿ ಉಲ್ಲೇಖಿಸಿದ್ದಾರೆ.

ಪ್ರಶಾಂತ್ ಸಂಬರಗಿ 10 ಪ್ರಶ್ನೆಗಳು

1.ನೀವೇ ಹಿಂದುವಾಗಿ ಭಜರಂಗಿ ಹೆಸರಿನಲ್ಲಿ ನಟಿಸಿ ಕಾಂಗ್ರೆಸ್ ನವರ ಬಜರಂಗದಳದ ನಿಷೇಧದ ಬಗ್ಗೆ ತಮ್ಮ ನಿಲುವು ಏನು?

2.ಒಂದು ಉತ್ತಮ ಮತ್ತು ಸತ್ಯ ವಾದ ಚಿತ್ರವಾದ The ಕೇರಳ Story ಚಿತ್ರವನ್ನು ನಿಮ್ಮ ಕಾಂಗ್ರೆಸ್ ನಿಷೇದಿಸುವುದಕ್ಕೆ ಮುಂದಾಗಿದೆ ನೀವು ಕನ್ನಡದ ಮೇರು ನಟನಾಗಿ ಮತ್ತು ನಿರ್ಮಾಪನಾಗಿ ನಿಮ್ಮ ನಿಲುವೇನು?

3.ನೀವು ಚಿತ್ರರಂಗದಿಂದ ಬಂದವರು, ಬೆಂಗಳೂರಿನಲ್ಲಿ The Kashmir Files ಚಿತ್ರ ಪ್ರದರ್ಶಿಸಿದಾಗ ಕಾಂಗ್ರೆಸ್ ಅದಕ್ಕೆ ವಿರೋಧ ಪಡಿಸಿತ್ತು  ಆಗ ಏಕೆ ನಿಮ್ಮ ದಿವ್ಯ ಮೌನ?

4.ಕನ್ನಡಿಗರ ಪರವಾಗಿದ್ದ ಕನ್ನಡ ಡಬ್ಬಿಂಗ್ ವಿರೋಧಿಸಿ ಈಗ ಅನ್ಯ ಭಾಷೆಯ ಚಿತ್ರದಲ್ಲಿ ನಟಿಸುತಿದ್ದೀರಾ. ಇದು ಸರಿನಾ?

5.ಡಾ.ರಾಜ್ ಕುಮಾರ್ ನಮ್ಮ ಆರಾಧ್ಯ ದೈವ ಮತ್ತು ರಾಜಕೀಯದಿಂದ ದೂರವಾಗಿದ್ದರು ಗೋಕಾಕ್ ಚಳುವಳಿ ಮತ್ತು ಅವರ ಕನ್ನಡ ಪರ ಹೋರಾಟ ಎಲ್ಲರಿಗೂ ಗೊತ್ತಿರುವ ವಿಚಾರ,ಅವರ ಮಗನಾಗಿ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು?

ಇದನ್ನೂ ಓದಿ : ಇಂದು ನಟ ಸುದೀಪ್, ಶಿವಣ್ಣ ಪ್ರಚಾರ ಎಲ್ಲೆಲ್ಲಿ?

6.2020 ರಲ್ಲಿ ಸ್ಯಾಂಡಲ್ ಹುಡ್ ಡ್ರಗ್ ವಿಷಯದಲ್ಲಿ ನೀವು ಏಕೆ ಮೌನವಾಗಿದ್ದಿರಿ? ಕರ್ನಾಟಕವನ್ನು ಮಾದಕ ಮುಕ್ತ ಮಾಡಲು ನಮ್ಮ ಯುವ ಜನರಿಗೆ ತಮ್ಮ ಸಂದೇಶವೇನು?

7.ಪಿಎಫ್‌ಐ ಮತ್ತು ಜಿಹಾದಿ ಜನರಿಂದ ಆರ್‌ಎಸ್‌ಎಸ್  ಹಿಂದೂ ಕಾರ್ಯಕರ್ತರ ಹತ್ಯೆಗಳ ಬಗ್ಗೆ ನಿಮ್ಮ ನಿಲುವು ಏನು?

8.ನಿಮ್ಮ ಎಲ್ಲಾ ಚಿತ್ರದಲ್ಲಿ ಹೆಣ್ಣು ಮಕ್ಕಳನ್ನು ಗೌರವಿಸುವ ಪಾತ್ರ ಮಾಡುವ ತಾವು ಲವ್ ಜಿಹಾದ್ ಮೇಲೆ ನಿಮ್ಮ ನಿಲುವೇನು?

9.ಡಿಕೆ ಶಿವಕುಮಾರ್ ಅವರ ಭ್ರಷ್ಟಾಚಾರ ಮತ್ತು ಆದಾಯ ತೆರಿಗೆ ಪ್ರಕರಣದ ಬಗ್ಗೆ ನಿಮ್ಮ ಅಭಿಪ್ರಾಯವೇನು?

10.ಮುಸ್ಲಿಂ ಒಲಿಕರಣ ಕಾಂಗ್ರೆಸ್ ಮಂತ್ರವಾಗಿದೆ ಇದರ ಬಗ್ಗೆ ತಮ್ಮ ಅಭಿಪ್ರಾಯ? ಹಿಂದೂಗಳು ನಿಮ್ಮ ಚಿತ್ರವನ್ನು  ನೋಡಬಾರದಾ?

RELATED ARTICLES

Related Articles

TRENDING ARTICLES