Sunday, December 22, 2024

ಬೆಂಗಳೂರಿನಲ್ಲಿ 15 ಸಾವಿರ ಖಾಕಿ ಕಣ್ಗಾವಲು!

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ನ್ಯಾಯ ಹಾಗೂ ಶಾಂತಿಯುತ ಮತದಾನಕ್ಕೆ ಬೆಂಗಳೂರು ನಗರ ಪೊಲೀಸ್ ಘಟಕ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.

ಮತದಾನದ ಭದ್ರತೆಗಾಗಿ 15 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 1,907 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಲಾಗಿದ್ದು, ಇಂತಹ ಮತಗಟ್ಟೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಎಣ್ಣೆ ಪ್ರಿಯರೇ ಇಲ್ಲಿ ಗಮನಿಸಿ : ರಾಜ್ಯದಲ್ಲಿ ಮೂರು ದಿನ ಸಿಗಲ್ಲ ಮದ್ಯ

ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿ ಇಬ್ಬರು ವಿಶೇಷ ಆಯುಕ್ತರು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಚುನಾವಣಾ ಚಲನ ವಲನವನ್ನು ಗಮನಿಸಲಿದ್ದಾರೆ. ಇನ್ನುಳಿದಂತೆ ಎಲ್ಲಾ ವಿಭಾಗದ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

1,56,000 ಪೊಲೀಸರ ನಿಯೋಜನೆ

ಚುನಾವಣೆ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಎಲ್ಲಾ ರೀತಿಯಲ್ಲಿ ಕ್ರಮ ಕೈಗೊಂಡಿದ್ದು, ಭದ್ರತೆಗಾಗಿ 1,56,000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ‌. ರಾಜ್ಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ‌. 304 ಡಿವೈಎಸ್​ಪಿ, 991 ಪಿಐ, 2610 ಪಿಎಸ್​ಐ, 5803 ಎಎಸ್ ಐ, 46,421 ಹೆಚ್​ಸಿ/ ಪಿಸಿ, 27,990 ಹೋಂ ಗಾರ್ಡ್ ಸೇರಿದಂತೆ 84,119 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ‌.

RELATED ARTICLES

Related Articles

TRENDING ARTICLES