Monday, December 23, 2024

ದೋಣಿ ದುರಂತ : ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು : 23 ಜನರ ಸಾವಿಗೆ ಕಾರಣವಾದ ಕೇರಳ ದೋಣಿ ದುರಂತ ಪ್ರಕರಣದ ಸಂತ್ರಸ್ಥರಿಗೆ ಕೇರಳ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಈ ಬಗ್ಗೆ ಸ್ವತಃ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದು, ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ. ಇಂದು ಮಲಪ್ಪುರಂ ಜಿಲ್ಲೆಯ ತಿರುರಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ವಿಜಯನ್, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

ಇದನ್ನೂ ಓದಿ : ಬಾರದ ಲೋಕಕ್ಕೆ ‘ಬಲರಾಮ’, ಭೀಮನಕಟ್ಟೆಯಲ್ಲೇ ಅಂತ್ಯಸಂಸ್ಕಾರ

ನ್ಯಾಯಾಂಗ ತನಿಖೆಗೆ ಆದೇಶ

ಘಟನೆಯಿಂದ ತಮಗೆ ಆಘಾತವಾಗಿದ್ದು, ಪ್ರಕರಣದ ಕುರಿತು ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ ಎಂದು ಸಂತ್ರಸ್ತರಿಗೆ ಭರವಸೆ ನೀಡಿದ್ದಾರೆ.

ನಿನ್ನೆ ಪರಪ್ಪನಂಗಡಿಯಲ್ಲಿ ಓವರ್ ಲೋಡ್ ಡಬ್ಬಲ್ ಡೆಕ್ಕರ್ ಪ್ರವಾಸಿ ದೋಣಿ ಮುಳುಗಿ ಪೊಲೀಸ್ ಅಧಿಕಾರಿ ಸೇರಿದಂತೆ 23 ಜನರು ಸಾವನ್ನಪ್ಪಿದ್ದರು. ಇನ್ನು ಹಲವರು ನೀರಿನಲ್ಲಿ ಮುಳುಗಿರುವ ಸಾಧ್ಯತೆ ಇದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಕ್ಷಣಾ ತಂಡಗಳ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

RELATED ARTICLES

Related Articles

TRENDING ARTICLES