Wednesday, January 22, 2025

ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ ಮತಗಟ್ಟೆ : ಬೆಳಗ್ಗೆ 7 ಗಂಟೆಗೆ ಮತದಾನ ಶುರು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ 40 ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ರಾಜ್ಯದ 9 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಆದಿವಾಸಿ ಜನಾಂಗದವರಾದ ಎರವ, ಪಣಿಯ, ಹಕ್ಕಿ-ಪಿಕ್ಕಿ, ಗೌಡಲು, ಹಸಲರು, ಕಾಡುಕುರುಬ , ಜೇನುಕುರುಬ, ಕೊರಗ, ಮಲೈಕುಡಿ, ಸಿದ್ದಿ ಜನಾಂಗದ ಮತದಾರರಿಗಾಗಿ ಸಾಂಪ್ರದಾಯಿಕ ಮತಗಟ್ಟೆ ಸಿದ್ಧಪಡಿಸಲಾಗಿದೆ.

ಈ ಪೈಕಿ ಚಾಮರಾಜನಗರ ಜಿಲ್ಲೆಯಲ್ಲಿ 9, ಉಡುಪಿ ಜಿಲ್ಲೆಯಲ್ಲಿ 1, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 5, ಮೈಸೂರು ಜಿಲ್ಲೆಯಲ್ಲಿ 9, ಶಿವಮೊಗ್ಗ ಜಿಲ್ಲೆಯಲ್ಲಿ 3, ಚಿಕ್ಕಮಗಳೂರು ಜಿಲ್ಲೆಯಲ್ಲಿ 2 ಮತ್ತು ಹಾಸನ ಜಿಲ್ಲೆಯಲ್ಲಿ 1 ಮತಗಟ್ಟೆ ಸ್ಥಾಪಿಸಲಾಗಿದೆ.

ಬೆಳಗ್ಗೆ 7 ಗಂಟೆಗೆ ಮತದಾನ ಶುರು

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗಳಿಗೆ ಇಂದು ಸಿಬ್ಬಂದಿ ತೆರಳಲಿದ್ದಾರೆ ಎಂದು ಬೆಂಗಳೂರು ನಗರ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಇದನ್ನೂ ಓದಿ : ಗುಡ್ ನ್ಯೂಸ್ : ಮೇ 10ರಂದು ರಾಜ್ಯಾದ್ಯಂತ ವಿಶೇಷ ರೈಲು, ಬೆಳಗಾವಿಗೆ ಬಂಪರ್

ಬೆಂಗಳೂರಿನಲ್ಲಿ ಮಾತನಾಡಿದ ಅವರು, 42 ಸಾವಿರ ಜನರಿಗೆ ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ. ಮಸ್ಟರಿಂಗ್ ಸೆಂಟರ್​​​ನಲ್ಲಿ ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ. ನಿಯೋಜಿತ ಸಿಬ್ಬಂದಿ ಆಯಾ ಮಸ್ಟರಿಂಗ್ ಸೆಂಟರ್​​​ಗಳಲ್ಲಿ EVM ಪಡೆದು ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳ್ತಾರೆ. ನಾವು ಈಗಾಗ್ಲೇ ರೂಟ್ ಮ್ಯಾಪ್ ಫಿಕ್ಸ್ ಮಾಡಿದ್ದೇವೆ ಎಂದರು.

ಒಂದು ಬಸ್​ನಲ್ಲಿ ಐದರಿಂದ ಆರು ಮತಗಟ್ಟೆಗಳಿಗೆ ಸಂಬಂಧಿಸಿದ ಸಿಬ್ಬಂದಿಯನ್ನು ಡ್ರಾಪ್ ಮಾಡಲಾಗುವುದು. ನಾಳೆ ಮತಗಟ್ಟೆಗಳಲ್ಲಿ ಬೆಳಿಗ್ಗೆ 5.30ಕ್ಕೆ ಅಣುಕು ಮತದಾನ ನಡೆಯಲಿದೆ. ನಂತರ ಬೆಳಗ್ಗೆ ಏಳು ಗಂಟೆಗೆ ಮತದಾನ ಆರಂಭವಾಗಲಿದೆ. EVMಗಳಲ್ಲಿ ದೋಷ ಕಂಡು ಬಂದರೆ ತಕ್ಷಣವೇ ಸರಿಪಡಿಸಲು ಸೆಕ್ಟರ್ ಆಫೀಸರ್​​​ಗಳನ್ನು ನಿಯೋಜನೆ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಮಹಿಳಾ ಮಾದರಿ ಮತಗಟ್ಟೆಗಳಿವೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES