Sunday, November 3, 2024

‘ಭಜರಂಗಬಲಿ ಕೀ ಜೈ’ : ಹನುಮನ ಜಪ ಮಾಡಿದ ಕಮಲ ನಾಯಕರು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಇನ್ನೊಂದು ದಿನ ಬಾಕಿಯಿದೆ. ಈ ಬೆನ್ನಲ್ಲೇ ಕಮಲ ನಾಯಕರು ಹನುಮನ ಜಪ ಮಾಡ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ನಾಯಕರಿಂದ ಹನುಮಾನ್ ಚಾಲೀಸಾ ಪಠಣ ಜೋರಾಗಿದೆ. ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆನ್ನಲ್ಲೆ ಇದೀಗ ಸಚಿವ ಅಶ್ವಥ್ ನಾರಾಯಣ ಕೂಡ ಹನುಮಾನ್​​​ ಚಾಲೀಸಾ ಪಠಿಸಿದ್ದಾರೆ.

ಬೆಂಗಳೂರಿನ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಹನುಮಾನ್​ ಚಾಲೀಸಾ ಪಠಿಸಿದ್ರು. ತಮ್ಮ ಗೆಲುವಿಗೆ ಹಾಗೂ ಪಕ್ಷದ ಗೆಲುವಿಗಾಗಿ ಅಶ್ವತ್ಥನಾರಾಯಣ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಯಲಹಂಕದಲ್ಲಿ ಮತದಾನ ಜಾಗೃತಿ ಅಭಿಯಾನ, ಪ್ರತಿಜ್ಞಾ ವಿಧಿ ಬೋಧನೆ

ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ್​​ ಬೊಮ್ಮಾಯಿ ಅವರು ಹನುಮಾನ್ ಚಾಲಿಸಾ ಪಠಣ ಮಾಡಿದ ಮಾಡಿದ್ದಾರೆ. ಹುಬ್ಬಳ್ಳಿಯ ವಿಜಯನಗರದ ಆಂಜನೇಯ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ಪಠಣ ಮಾಡಿದರು. ಹನುಮಂತ ದೇವರ ಮುಂದೆ ಕುಳಿತು ಸಿಎಂ ಚಾಲೀಸಾ ಪಠಣ ಮಾಡಿದರು. ಸಿಎಂ ಬಸವರಾಜ ಬೊಮ್ಮಾಯಿಗೆ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್, ಪಾಲಿಕೆ ಸದಸ್ಯ ಸಂತೋಷ ಸೇರಿದಂತೆ ಸ್ಥಳೀಯ ನಿವಾಸಿಗಳು ಸಾಥ್ ನೀಡಿದ್ದಾರೆ.

ಭಜರಂಗಬಲಿ ಕೀ ಜೈ

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಿಎಂ ಬೊಮ್ಮಾಯಿ ಮಾಹಿತಿ ಹಂಚಿಕೊಂಡಿದ್ದಾರೆ. ಹನುಮಾನ್ ಚಾಲೀಸ್ ಪಠಣವು ನನ್ನ  ಆಂತರ್ಯದ ಶಕ್ತಿಯನ್ನು ಹೆಚ್ಚಿಸಿತು ಎಂದು ಬರೆದುಕೊಂಡಿದ್ದಾರೆ. ಹುಬ್ಬಳ್ಳಿಯ ವಿಜಯನಗರದಲ್ಲಿರುವ ಕೆಂಪಣ್ಣನವರ ಕಲ್ಯಾಣ ಮಂಟಪದ ಆವರಣದಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ನಡೆದ ಹನುಮಾನ ಚಾಲೀಸ್ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹನುಮಾನ್ ಚಾಲೀಸಾವನ್ನು ಪಠಣ ಮಾಡಿದೆನು ಎಂದಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನ ಪ್ರಸನ್ನ ವೀರಾಂಜನೇಯ ದೇವಸ್ಥಾನದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಚಿವ ಕೆ.ಗೋಪಾಲಯ್ಯ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿರುವ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಪಕ್ಷ ಬಜರಂಗ ದಳ ನಿಷೇಧ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಿದೆ. ಆಂಜನೇಯ ಸ್ವಾಮಿಯನ್ನು ದೇಶದ ಜನರು ನಂಬಿದ್ದಾರೆ. ಆದ್ದರಿಂದ ಸ್ವಾಮಿ ಹನುಮಂತನ ಪೂಜೆ ಮಾಡಿ, ಧರ್ಮದ ರಕ್ಷಣೆಗೆ ಶಕ್ತಿ ನೀಡಲು ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

RELATED ARTICLES

Related Articles

TRENDING ARTICLES