Saturday, November 2, 2024

ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ತೆರಿಗೆ ಮುಕ್ತ : ಸಿಎಂ ಯೋಗಿ ಆದಿತ್ಯನಾಥ್

ಬೆಂಗಳೂರು : ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಸಿಎಂ ಯೋಗಿ ಟ್ವೀಟ್ ಮಾಡಿದ್ದಾರೆ. ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಲೋಕಭವನದಲ್ಲಿ ಆಯೋಜಿಸಲಾಗಿರುವ ವಿಶೇಷ ಪ್ರದರ್ಶನದಲ್ಲಿ ಚಲನಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷ, ಅಕ್ಷಯ್ ಕುಮಾರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಕ್ಕೆ ರಾಜ್ಯದಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸಿದ್ದರು. ಇದೀಗ ದಿ ಕೇರಳ ಸ್ಟೋರಿಗೆ ತೆಇಗೆ ಮುಕ್ತ ಎಂದು ಘೋಷಣೆ ಮಾಡಿದೆ.

ಇದನ್ನೂ ಓದಿ : ‘ನನಗೆ ಹುಡ್ಗ ಬೇಕು, ಸ್ವಯಂವರ’ ಏರ್ಪಾಟು ಮಾಡಿ : ನಟಿ ರಮ್ಯಾ

ಸಿನಿಮಾ ಪ್ರದರ್ಶನ ನಿಷೇಧಿಸಿದ್ದ ದೀದಿ

‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ನಿಷೇಧಿಸಿರುವ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿತ್ರತಂಡ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಅಲ್ಲದೆ, ತಮಿಳುನಾಡು ಚಿತ್ರಮಂದಿರಗಳಲ್ಲಿ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಸೂಚಿಸುವಂತೆಯೂ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ನಿನ್ನೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದ್ವೇಷ ಮತ್ತು ಹಿಂಸಾಚಾರವನ್ನು ತಡೆಗಟ್ಟುವ ಉದ್ದೇಶದಿಂದ ವಿವಾದಾತ್ಮಕ ಚಲನಚಿತ್ರ ‘ದಿ ಕೇರಳ ಸ್ಟೋರಿ’ ಪ್ರದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಆದೇಶಿಸಿದ್ದರು. ಇನ್ನು ಚಿತ್ರದ ವಿರುದ್ಧ ಪರ ವಿರೋಧದ ಚರ್ಚೆಗಳು ಶುರುವಾಗಿದ್ದು, ಕೆಲವರು ಚಿತ್ರವನ್ನು ವಿರೋಧಿಸಿದ್ದಾರೆ.. ಬಹುತೇಕ ಮಂದಿ ಚಿತ್ರವನ್ನು ವೀಕ್ಷಿಸಿ ಸೋಷಿಯಲ್​ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES