ಬೆಂಗಳೂರು : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಬಿಜೆಪಿ ನಾಯಕರು ಬೆಳಗ್ಗೆಯಿಂದಲೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಿರ್ಮಲಾ ಸೀತರಾಮನ್ ಸೇರಿದಂತೆ ಹಲವು ನಾಯಕರು ತಮ್ಮ ಕ್ಷೇತ್ರದ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಬಿಜೆಪಿ ಪಕ್ಷದ ಪ್ರಮುಖ ನಾಯಕರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಕುಟುಂಬ ಸದಸ್ಯರೊಂದಿಗೆ ಮತ ಚಲಾಯಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿಯ ಸರ್ಕಾರಿ ಶಾಲೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮತ ಚಲಾಯಿಸಿದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದ ವಿವೇಕಾನಂದ ನಗರದ ರೋಟರಿ ಶಾಲೆಯಲ್ಲಿ ಕುಟುಂಬದವರೊಂದಿಗೆ ಮತ ಚಲಾಯಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಪೂರ್ವದ ಸಂತ ಅಲೋಶಿಯಸ್ ಶಾಲೆಯ ಮತಗಟ್ಟೆ ಸಂಖ್ಯೆ 90 ರಲ್ಲಿ ಚಲಾಯಿಸಿದರು.
ಇದನ್ನೂ ಓದಿ : ವೋಟ್ ಮಾಡಿ ಸೆಲ್ಫಿಗೆ ಪೋಸ್ ನೀಡಿದ ನಟಿಯರು ; ಇಲ್ಲಿವೆ ನೋಡಿ ಫೋಟೋಗಳು
ಬೆಂಗಳೂರಿನ ಹೆಬ್ಬಾಳ ಬೂತ್ ನಂ. 50 ರಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ ಚಲಾಯಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ಮತ ಚಲಾಯಿಸಿದರು.
ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಕೋಟತಟ್ಟು ಗ್ರಾಮ ಪಂಚಾಯತಿಯಲ್ಲಿರುವ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು.
ವಸತ ಸಚಿವ ವಿ.ಸೋಮಣ್ಣ ಅವರು ಚಾಮರಾಜನಗರದ ಪೇಟೆ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 75 ರಲ್ಲಿ ಪತ್ನಿ ಶೈಲಜಾ ಸೋಮಣ್ಣ ಅವರೊಂದಿಗೆ ಮತ ಚಲಾಯಿಸಿದರು.
ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರದ 102 ನೇ ವಾರ್ಡಿನ ಅಮರ ವಾಣಿ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿದರು.
ಸಂಸದ ತೇಜಸ್ವಿ ಸೂರ್ಯ ಅವರು ಕುಟುಂಬದ ಸದಸ್ಯರೊಂದಿಗೆ ಬೆಂಗಳೂರಿನಲ್ಲಿ ಮತದಾನ ಮಾಡಿದರು.
ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಚಿಕ್ಕಬಳ್ಳಾಪುರದ ಪೆರೇಸಂದ್ರದ ಮತಗಟ್ಟೆಯಲ್ಲಿ ಪತ್ನಿಯೊಂದಿಗೆ ಮತದಾನ ಮಾಡಿದರು.
ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮಲ್ಲೇಶ್ವರ ಕ್ಷೇತ್ರದ ಮತಗಟ್ಟೆಯಲ್ಲಿ ಕುಟುಂಬ ಸಮೇತ ಮತದಾನ ಮಾಡಿದರು.