Wednesday, January 22, 2025

ಮತ ಚಲಾಯಿಸಿ ಪೋಸ್ ಕೊಟ್ಟ ‘ಕೈ’ ನಾಯಕರು : ಇಲ್ಲಿವೆ ಫೋಟೋಗಳು

ಬೆಂಗಳೂರು : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಎಪಿ ಪಕ್ಷದ ಪ್ರಮುಖ ನಾಯಕರು, ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ಇಂದು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಈ ಪೈಕಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಮತದಾನದ ಬಳಿಕ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ ಸೇರಿದಂತೆ ಕಾಂಗ್ರೆಸ್ ನ ಪ್ರಮುಖರು ತಮ್ಮ ಸ್ವಗ್ರಾಮದಲ್ಲಿ ಮತದಾನ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಬುರ್ಗಿಯಲ್ಲಿ ಮತ ಚಲಾಯಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ದೊಡ್ಡಾಲಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವರುಣಾ ವಿಧಾನ ಸಭಾ ಕ್ಷೇತ್ರದ ಸಿದ್ದರಾಮನ ಹುಂಡಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಮಾಜಿ ಮುಖ್ಯಮಂತ್ರ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಎಸ್.ಬಿ.ಐ ಆಫೀಸರ್ಸ್ ಸೊಸೈಟಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆ ಸಂಖ್ಯೆ 122 ರಲ್ಲಿ ಕುಟುಂಬ ಸಮೇತವಾಗಿ ಮತದಾನ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಹಾವೇರಿ ನಗರದ ಶ್ರೀ ಜ್ಞಾನ ಗಂಗಾ ಶಿಕ್ಷಣ ಸಮಿತಿ ಕನ್ನಡ ಪ್ರೈಮರಿ ಸ್ಕೂಲ್ (ಪ್ರಾಥಮಿಕ ಗೆಳೆಯರ ಬಳಗ ಸ್ಕೂಲ್) ನಲ್ಲಿ ಮತದಾನ ಮಾಡಿದರು.

ತೇರದಾಳ ವಿಧಾನಸಭಾ ‌ಕ್ಷೇತ್ರದ ರಬಕವಿ ಪಟ್ಟಣದಲ್ಲಿ ಮಾಜಿ ಸಚಿವೆ ಉಮಾಶ್ರೀ ಅವರು ಮತ ಚಲಾಯಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಬಾಲ್ಕಿ ವಿಧಾನಸಭಾ ಕ್ಷೇತ್ರದ ಖಂಡ್ರೆ ಗಲ್ಲಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬಬಲೇಶ್ವರದಲ್ಲಿ ಮತ ಚಲಾಯಿಸಿದರು.

ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರದಲ್ಲಿ ಮತ ಚಲಾಯಿಸಿದರು.

RELATED ARTICLES

Related Articles

TRENDING ARTICLES