Monday, December 23, 2024

ಸೀಕಲ್ ರಾಮಚಂದ್ರಗೌಡರಿಂದ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ

ಬೆಂಗಳೂರು : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ಅವರು ತಮ್ಮ ಮತಕ್ಷೇತ್ರದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಪವರ್ ಟಿವಿಗೆ ಪ್ರತಿಕ್ರಿಯಿಸಿರುವ ಅವರು, ಮತದಾನ ಯಶಸ್ವಿಯಾಗಿ ಮುಗಿದಿದೆ. ಹಗಲಿರುಳು ಶ್ರಮಿಸಿದ ಶಿಡ್ಲಘಟ್ಟ ಕ್ಷೇತ್ರದ ಎಲ್ಲಾ ನನ್ನ ಪ್ರೀತಿಯ ಕಾರ್ಯಕರ್ತರು, ಮುಖಂಡರು, ಸ್ನೇಹಿತರು, ಹಿತೈಷಿಗಳು ಹಾಗೂ ಮಾಧ್ಯಮ ಮಿತ್ರರಿಗೆ ಪ್ರೀತಿಪೂರ್ವಕ ಧನ್ಯವಾದ ಎಂದಿದ್ದಾರೆ.

ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಮಸ್ತ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮತದಾರರ ಬಂಧುಗಳಿಗೆ ವಿಶೇಷವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಸೀಕಲ್ ರಾಮಚಂದ್ರಗೌಡ ಅವರು ಹೇಳಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಪರ ಜನರ ಒಲವಿದ್ದು, ಕಮಲ ಅರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಎಕ್ಸಿಟ್ ಪೊಲ್ಸ್ ಏನೇ ಹೇಳಿದರೂ ‘ನಾವೇ ಕಿಂಗ್’ ಆಗುತ್ತೇವೆ : ಸಿಎಂ ಬೊಮ್ಮಾಯಿ

ಉಲ್ಲೂರು ಪೇಟೆಯಲ್ಲಿ ಮತದಾನ

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ಅವರು ಇಂದು ಮತದಾನ ಮಾಡಿದರು. ಮತದಾನಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿದ ಅವರು ಗೆಲುವಿಗಾಗಿ ಪ್ರಾರ್ಥಿಸಿದರು. ಶಿಡ್ಲಘಟ್ಟದ ವೆಂಕಟೇಶ್ವರ ದೇವಾಲಯ, ಕನ್ನಿಕಾ ಪರಮೇಶ್ವರಿ ಮತ್ತು ಗಣೇಶನ ದೇವಾಲಯಗಳಿಗೆ ಪತ್ನಿ ಮತ್ತು ಮಾಜಿ ಶಾಸಕ ಎಂ ರಾಜಣ್ಣ ಅವರೊಂದಿಗೆ ತೆರಳಿ, ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಳಿಕ, ಶಿಡ್ಲಘಟ್ಟ ತಾಲೂಕಿನ ಉಲ್ಲೂರು ಪೇಟೆ ಮತಗಟ್ಟೆ ಸಂಖ್ಯೆ 161ರಲ್ಲಿ ಸೀಕಲ್ ರಾಮಚಂದ್ರಗೌಡರು ಹಾಗೂ ಪತ್ನಿ ರಾಣಿ ರಾಮಚಂದ್ರಗೌಡ ಅವರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

RELATED ARTICLES

Related Articles

TRENDING ARTICLES