Thursday, January 23, 2025

ಕೆಕೆಆರ್ ಗೆ ಆರಂಭಿಕ ಆಘಾತ : ಇಂದಿನ ಪಂದ್ಯದಲ್ಲಿ ಗೆಲುವು ಯಾರಿಗೆ?

ಬೆಂಗಳೂರು : ಐಪಿಎಲ್ ಇಂದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ಬಲಿಷ್ಠ ರಾಜಸ್ಥಾನ ರಾಯಲ್ಸ್ ಹಾಗೂ ನಿತೀಶ್ ರಾಣ ಸಾರಥ್ಯದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೂಖಾಮುಖಿಯಾಗಲಿದೆ. ಟಾಸ್ ಗೆದ್ದ ರಾಜಸ್ಥಾನ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದು, ಬಿಗ್ ಫೈಟ್ ನಿರೀಕ್ಷಿಸಲಾಗಿದೆ. ಈ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಜಿಗಿತ ಸಾಧಿಸಲು ಎರಡೂ ತಂಡಗಳು ರಣತಂತ್ರ ರೂಪಿಸಿವೆ.

ಕೆಕೆಆರ್ ಆರಂಭಿಕ ಬ್ಯಾಟರ್ ಜೇಸನ್ ರಾಯ್ ಅವರು ಟ್ರೆಂಟ್ ಬೌಲ್ಟ್ ಎಸೆದ 2ನೇ ಓವರ್ 2ನೇ ಎಸೆತವನ್ನು ಬೌಂಡರಿಯತ್ತ ಬಾರಿಸಿದರು. ಆದರೆ, ಶಿಮ್ರಾನ್ ಹೆಟ್ಮೆಯರ್ ಹಿಡಿದ ಅಧ್ಬುತ ಕ್ಯಾಚ್ ಗೆ ವಿಕೆಟ್ ಒಪ್ಪಿಸಿ ಹೊರನಡೆದರು.

ರಾಜಸ್ಥಾನ ತಂಡ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಕೋಲ್ಕತ್ತಾ ತಾನಾಡಿರುವ 11 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು 6ನೇ ಸ್ಥಾನದಲ್ಲಿದೆ. ಹೀಗಾಗಿ, ಇಂದಿನ ಪಂದ್ಯ ಎರಡೂ ತಂಡಗಳಿಗೂ ಮಹತ್ವದ್ದಾಗಿದೆ.

ಇದನ್ನೂ ಓದಿ : ಮೆಸ್ಸಿ ಮುಡಿಗೆ ‘ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿ’

ರಾಜಸ್ಥಾನ್ ರಾಯಲ್ಸ್

ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಜೋ ರೂಟ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಕೆ.ಎಂ ಆಸೀಫ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

ಕೋಲ್ಕತ್ತಾ ತಂಡ

ನಿತೀಶ್ ರಾಣಾ (ನಾಯಕ), ಜೇಸನ್ ರಾಯ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅಂಕುರ್ ರಾಯ್

RELATED ARTICLES

Related Articles

TRENDING ARTICLES