Sunday, November 3, 2024

ರಾಜಸ್ಥಾನಕ್ಕೆ ಭರ್ಜರಿ ಗೆಲುವು : 47 ಎಸೆತಗಳಲ್ಲಿ ಅಜೇಯ 98 ರನ್ ಚಚ್ಚಿದ ಜೈಸ್ವಾಲ್

ಬೆಂಗಳೂರು : ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ರಾಜಸ್ಥಾನ್ ರಾಯಲ್ಸ್ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ವಿಧ್ವಂಸಕ ಬ್ಯಾಟಿಂಗ್ ಗೆ ಕೋಲ್ಕತ್ತಾ ಬೌಲರ್ ಗಳು ಉಡೀಸ್ ಆದರು. ಸ್ಫೋಟಕ ಬ್ಯಾಟಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ 47 ಎಸೆತಗಳಲ್ಲಿ 13 ಬೌಂಡರಿ, 5 ಸಿಕ್ಸರ್ ನೆರವಿನಿಂದ ಅಜೇಯ 98 ರನ್ ಬಾರಿಸಿದರು.

ಯಶಸ್ವಿ ಜೈಸ್ವಾಲ್ ಗೆ ಸಾಥ್ ನೀಡಿದ ನಾಯಕ ಸಂಜು ಸ್ಯಾಮ್ಸನ್ 2 ಬೌಂಡರಿ, 5 ಸಿಕ್ಸರ್ ನೆರವಿನಿಂದ ಅಜೇಯ 48 ರನ್ ಗಳಿಸಿದರು. ಮತ್ತೊಬ್ಬ ಆರಂಭಿಕ ಆಟಗಾರ ಜೋಸ್ ಬಟ್ಲರ್ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು.

ಇದನ್ನೂ ಓದಿ : ಚಿನ್ನಸ್ವಾಮಿಯಲ್ಲಿ ‘ಕಿಂಗ್ ಕೊಹ್ಲಿ’ ಮತ್ತೊಂದು ದಾಖಲೆ

ಮೊದಲು ಬ್ಯಾಟಿಂಗ್ ಮಾಡಿದ್ದ ಕೆಕೆಆರ್ 149 ರನ್ ಗಳಿಸಿತ್ತು. 150 ರನ್ ಗುರಿ ಬೆನ್ನತ್ತಿದ್ದ ರಾಜಸ್ಥಾನ್ ರಾಯಲ್ಸ್ ತಂಡ ಕೇವಲ 13.1 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಭರ್ಜರಿ ಜಯ ಸಾಧಿಸಿತು. 14ನೇ ಓವರ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದ ಜೈಸ್ವಾಲ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಕೇವಲ 2 ರನ್​ಗಳಿಂದ (ಅಜೇಯ 98 ರನ್) ಶತಕ ವಂಚಿತರಾದರು.

ರಾಹುಲ್ ದಾಖಲೆ ಉಡೀಸ್

ಕನ್ನಡಿಗ ಕೆ.ಎಲ್ ರಾಹುಲ್ ಈವರೆಗೆ ಐಪಿಎಲ್ ನಲ್ಲಿ ಅತಿ ವೇಗವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದರು. 2018 ರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಕೆ.ಎಲ್ ರಾಹುಲ್ ಡೆಲ್ಲಿ ವಿರುದ್ಧ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದಾದ ಬಳಿಕ 2022 ರಲ್ಲಿ ಕೆಕೆಆರ್ ನ ಪ್ಯಾಟ್ ಕಮಿನ್ಸ್ ಮುಂಬೈ ವಿರುದ್ಧ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ರಾಹುಲ್ ಅವರ ದಾಖಲೆ ಸರಿಗಟ್ಟಿದ್ದರು. ಇದೀಗ ಯಶಸ್ವಿ ಜೈಸ್ವಾಲ್ ಈ ದಾಖಲೆಗಳನ್ನು ಅಳಿಸಿ ಹಾಕಿದ್ದಾರೆ.

6, 6, 4, 4, 2, 4

ಇನ್ನು ನಿತೀಶ್ ರಾಣಾ ಎಸೆದ ಮೊದಲ ಓವರ್​ನಲ್ಲಿ 20 ವರ್ಷದ ಯಶಸ್ವಿ ಜೈಸ್ವಾಲ್ 6, 6, 4, 4, 2, 4 ಬೌಂಡರಿ ಸಿಡಿಸಿದರು. ಆ ಮೂಲಕ ಮೊದಲ ಓವರ್​ನಲ್ಲೇ ಅತ್ಯಧಿಕ ರನ್​ ಕಲೆಹಾಕಿದ ಅತ್ಯಂತ ಕಿರಿಯ ಬ್ಯಾಟ್ಸ್​ಮನ್ ಎನಿಸಿಕೊಂಡರು.

RELATED ARTICLES

Related Articles

TRENDING ARTICLES