Monday, December 23, 2024

ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ : ಸಿದ್ದರಾಮಯ್ಯ ಹೀಗೊಂದು ಮನವಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಗಲಿರುಳು ಪಕ್ಷಕ್ಕಾಗಿ ದುಡಿದ (ಶ್ರಮಿಸಿದ) ಕಾರ್ಯರ್ತರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶೇಷ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್‌; ಸಿಂಗಾಪೂರ್ ಗೆ ತೆರಳಿದ ಹೆಚ್ ಡಿ ಕೆ

ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರಲ್ಲೆರನ್ನು ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ. ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ. ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ ಎಂದು ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES