ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯ ವಿಚಾರ ಹೆಚ್ಚು ಮುನ್ನಲೆಗೆ ಬಂದಿತ್ತು. ಲಿಂಗಾಯತ ಮತಗಳ ವಿಭಜನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎನ್ನಲಾಗುತ್ತಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವೀರಶೈವ ಲಿಂಗಾಯತ ಮತಗಳ ವಿಭಜನೆ ಆಗಿಲ್ಲ ಎಂದು ಹೇಳಿದ್ದಾರೆ.
ನಾನೇ ಸ್ವಂತ ನಿರ್ಧಾರದಿಂದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದೇನೆ. ಇದನ್ನು ಲಿಂಗಾಯತ ಸಮುದಾಯ ಅರ್ಥ ಮಾಡಿಕೊಂಡಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗುತ್ತಾರೆ. ಈ ಎಲ್ಲಾ ನಿರ್ಧಾರ ಹೈಕಮಾಂಡ್ ನದ್ದು ಎಂದು ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ : ಬಿಗ್ ಶಾಕ್ : ಕಾರ್ಯಕರ್ತರೇ ಸಿಎಂ ಆಗುತ್ತಾರೆ ಎಂದ ಕೇಂದ್ರ ಸಚಿವೆ
115ಕ್ಕೂ ಹೆಚ್ಚು ಸ್ಥಾನ ಸಿಗಲಿದೆ
ಕರ್ನಾಟಕದಲ್ಲಿ ಮತ್ತೆ ನಾವೇ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ. ಸಮೀಕ್ಷೆ ಏನೇ ಹೇಳಿದರೂ ಮತ ಎಣಿಕೆ ನಂತರ ಗೊತ್ತಾಗಲಿದೆ. ನಮಗೆ ಸ್ಪಷ್ಟವಾದ ಬಹುಮತ ಸಿಗಲಿದೆ. ಈ ಚುನಾವಣೆಯಲ್ಲಿ ಬಿಜೆಪಿಗೆ 115ಕ್ಕೂ ಹೆಚ್ಚು ಸ್ಥಾನ ಸಿಗಲಿದೆ ಎಂದು ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸವದತ್ತಿ ಯಲ್ಲಮ್ಮಗೆ ಸಿಎಂ ಪೂಜೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆ ಮುಗಿಯುತ್ತಿದ್ದಂತೆ ಬೆಳಗಾವಿ ಜಿಲ್ಲೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಚೆನ್ನಮ್ಮ ಜೊತೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.