ಬೆಂಗಳೂರು : ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೆ ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಮಾರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬುವ ಉದ್ದೇಶದಿಂದ ಹಾಗೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.
ನನ್ನ ಪ್ರಾಣ ಇರುವವರೆಗೆ ನಾನು ಹೋರಾಟದಿಂದ ಹಿಂದೆ ಸರಿಯೋನಲ್ಲ. ನನ್ನ ಆರೋಗ್ಯ ಇರುವವರೆಗೆ ಹೋರಾಟ ಮಾಡ್ತೀನಿ. ಅವರು ಬಹುಮತ ಬರದಿದ್ದರೆ ಪಕ್ಷದ ವಿಸರ್ಜನೆ ಮಾಡುವ ಮೊದಲೇ ನಮ್ಮ ಪಕ್ಷ ಸೇರ್ಪಡೆ ಆಗಿ ಅಂತ ಅವರ ಕಾರ್ಯಕರ್ತರಿಗೆ ಕರೆ ನೀಡಿದ್ದೆ. ಈಗಲೂ ಅದನ್ನೇ ಹೇಳ್ತೀನಿ. ಅವರ ಲೆಕ್ಕಾಚಾರ, ರೆಸ್ಟ್, ಅವರ ಆರೋಗ್ಯದ ಬಗ್ಗೆ ನಾನು ಮಾತನಾಡಲ್ಲ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ನವ್ರುರಿಗೆ ಈ ಬಾರಿ ಸ್ಷಷ್ಟ ಬಹುಮತ ಬರಲ್ಲ: ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಮೈಸೂರಿನ ಹೊಸಕಾಮನಕೊಪ್ಪಲು ಗ್ರಾಮದಲ್ಲಿ ಹೋಮ ಹವನ ನಡೆಸಿ ವಿಶೇಷ ಪೂಜೆ ಮಾಡಲಾಗಿದೆ. ಗ್ರಾಮದ ಲಕ್ಷ್ಮೀದೇವಿ ಕಂತಮ್ಮ ದೇವಸ್ಥಾನದಲ್ಲಿ ಗ್ರಾಮದ ಕಾಂಗ್ರೆಸ್ ಮುಖಂಡ ರಾಜೇಶ್ ಎಂಬುವವರ ನೇತೃತ್ವದಲ್ಲಿ ವಿಶೇಷ ಹೋಮ ನಡೆಸಲಾಗಿದೆ. ಸಿದ್ದರಾಮಯ್ಯ ವರುಣದಲ್ಲಿ ಗೆದ್ದು ಸಿಎಂ ಆಗಲಿ. ರಾಜ್ಯಕ್ಕೆ ಒಳ್ಳೆಯದಾಗುತ್ತೆ ಎಂದು ಕಾಂಗ್ರೆಸ್ ಮುಖಂಡ ರಾಜೇಶ್ ಹೇಳಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಆಣೆ ಪ್ರಮಾಣ
ಮೈಸೂರಿನ ಚಾಮುಂಡೇಶ್ವರಿಯಲ್ಲಿ ಆಣೆ ಪ್ರಮಾಣ ಹೆಚ್ಚಾಗಿದೆ. ಉಪ್ಪಿನ ಆಣೆ ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ಕೆ.ಮರೀಗೌಡ ಸವಾಲು ಎಸೆದಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಆಣೆ ಪ್ರಮಾಣಕ್ಕೆ ಬರಲಿ ಎಂದು ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡಗೆ ಪಂಥ ಅಹ್ವಾನ ನೀಡಿದ್ದಾರೆ.