Wednesday, January 22, 2025

ಮ್ಯಾಜಿಕ್ ನಂಬರ್ ನತ್ತ ಕಾಂಗ್ರೆಸ್ : ಯಾವ ಕ್ಷೇತ್ರದಲ್ಲಿ ಯಾರಿಗೆ ಜಯ? : ಇಲ್ಲಿದೆ ಮಾಹಿತಿ

ಬೆಂಗಳೂರು : ಇಡೀ ರಾಜ್ಯವೇ ಎದುರು ನೋಡುತ್ತಿದ್ದ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮುತದತ್ತ ಮುಖಮಾಡಿದೆ.

ರಾಮನಗರ ಜಿಲ್ಲೆ ಹೈವೋಲ್ಟೆಜ್​ ಕ್ಷೇತ್ರ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಶಾಲಿಗಳಾಗಿದ್ದಾರೆ. ಸಚಿವ ಆರ್.​ ಅಶೋಕ್​ ಹೀನಾಯವಾಗಿ ಸೋತಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್​ ಅಭ್ಯರ್ಥಿ​ ಲಕ್ಷ್ಮಣ ಸವದಿಯವರು ಜಯಗಳಿಸಿದ್ದಾರೆ. 59 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಅವರನ್ನು ಸೋಲಿಸಿದ್ದಾರೆ.

ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ​ ಜಮೀರ್ ಅಹ್ಮದ್​ ಜಯಭೇರಿ ಭಾರಿಸಿದ್ದಾರೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಸಿ.ಪುಟ್ಟರಂಗಶೆಟ್ಟಿಗೆ ಗೆದ್ದಿದ್ದಾರೆ. ವಿ.ಸೋಮಣ್ಣಗೆ ಸೋತಿದ್ದಾರೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ರಿಜ್ವಾನ್ ಅರ್ಷದ್​ ಗೆಲವು ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿ  ಅವರು 10,000 ಮತಗಳ ಅಂತರದ ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರಾಜು ಸೋತಿದ್ದಾರೆ.

ರೋಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ್ ಗೆಲುವು ಸಾಧಿಸಿದ್ದಾರೆ.

ಮಂಗಳೂರಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಗೆಲವು ಸಾಧಿಸಿದ್ದಾರೆ.

ದಾವಣಗೆರೆ ಉತ್ತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್​.ಎಸ್​ ಮಲ್ಲಿಕಾರ್ಜುನಗೆ ಗೆದ್ದಿದ್ದಾರೆ.

ಬಳ್ಳಾರಿ ಗ್ರಾಮಾಂತರದಲ್ಲಿ ಕಾಂಗ್ರೆಸ್​ ನ​ ಬಿ.ನಾಗೇಂದ್ರ 21,000 ಮತಗಳ ಅಂತರದಿಂದ ಗೆದ್ದಿದ್ದಾರೆ. ಸಚಿವ ಬಿ.ಶ್ರೀರಾಮುಲು ಸೋತಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ.

ವಿರಾಜಪೇಟೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಎ.ಎಸ್.ಪೊನ್ನಣ್ಣ 4,371 ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್​ ಖರ್ಗೆ 16 ಸಾವಿರ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ.ಕೆ.ಸುಧಾಕರ್​ ಅವರು ಹೀನಾಯವಾಗಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್​ ಈಶ್ವರ್ ಅಯ್ಯರ್​ ಜಯಭೇರಿ ಭಾರಿಸಿದ್ದಾರೆ.

ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಎ.ಹ್ಯಾರಿಸ್ ಜಯ ಸಾಧಿಸಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ್ ಗೆಲುವು ಸಾಧಿಸಿದ್ದಾರೆ.

ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ದಿನೇಶ್ ಗುಂಡೂರಾವ್ ಗೆಲುವು ಸಾಧಿಸಿದ್ದಾರೆ. ಕೇವಲ 500 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಗೋವಿಂದ ಕಾರಜೋಳ ಅವರು 16 ಸಾವಿರ ಮತಗಳ ಅಂತರದಿಂದ ಹೀನಾಯವಾಗಿ ಸೋತಿದ್ದಾರೆ. ಆರ್​.ಬಿ.ತಿಮ್ಮಾಪುರ ಗೆದ್ದಿದ್ದಾರೆ.

ಬೆಳಗಾವಿ ಜಿಲ್ಲೆಯ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್​ ಜಯ ಸಾಧಿಸಿದ್ದಾರೆ.

ಕೋಲಾರ ಜಿಲ್ಲೆ ಶ್ರೀನಿವಾಸಪುರ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸ್ಪೀಕರ್​ ರಮೇಶ್ ಕುಮಾರ್ ಸೋತಿದ್ದಾರೆ. ಜೆಡಿಎಸ್​ ವೆಂಕಟಶಿವಾರರೆಡ್ಡಿ ಅವರು ಜಯ ಸಾಧಿಸಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಸೋತಿದ್ದಾರೆ. ಜೆಡಿಎಸ್​  ಅಭ್ಯರ್ಥಿ ಸುರೇಶ್ ಬಾಬು ಅವರಿಗೆ ಜಯವಾಗಿದೆ.

ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲುಂಡಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಸಾಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್​ ಗುಡಗಂಟಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಸೋತಿದ್ದಾರೆ.

ಬೆಂಗಳೂರಿನ ರಾಜಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್‌ಕುಮಾರ್ ಅವರು 8,052 ಮತಗಳ ಅಂತರದಿಂದ ಗೆಲುವು‌ ಸಾಧಿಸಿದ್ದಾರೆ.

RELATED ARTICLES

Related Articles

TRENDING ARTICLES