Thursday, April 25, 2024

ತುಮಕೂರು ‘ಕಬ್ಜ’ ಮಾಡಿದ ಕಾಂಗ್ರೆಸ್ : ಬಿಜೆಪಿ, ಜೆಡಿಎಸ್ ಛಿದ್ರ.. ಛಿದ್ರ..

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬೆಂಗಳೂರಿಗೆ ಸಮೀಪದಲ್ಲಿರುವ ಕಲ್ಪತರು ನಾಡು ತುಮಕೂರು ಜಿಲ್ಲೆಯನ್ನು ಕಾಂಗ್ರೆಸ್ ‘ಕಬ್ಜ’ ಮಾಡಿದೆ.

ತುಮಕೂರು ಜಿಲ್ಲೆಯ ಎಲ್ಲಾ 11 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಪಕ್ಷ 7 ಸ್ಥಾನಗಳನ್ನು ಪಡೆದು ಪ್ರಚಂಡ ಗೆಲುವನ್ನು ಸಾಧಿಸಿದೆ.

ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ಕುಣಿಗಲ್, ಗುಬ್ಬಿ, ತಿಪಟೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಜೆಡಿಎಸ್ 2 ಸ್ಥಾನಗಳನ್ನು ಪಡೆದಿದ್ದರೆ, ಬಿಜೆಪಿ ಎರಡು ಸ್ಥಾನಗಳನ್ನು ಗಳಿಸಲಷ್ಟೇ ಶಕ್ತವಾಗಿದೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿದ್ದ ಜಿ.ಬಿ ಜ್ಯೋತಿಗಣೇಶ್ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ. ಸುರೇಶ್ ಗೌಡ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ : ಈ ಸೋಲು ಬಿಜೆಪಿಗೆ ಹೊಸದೇನಲ್ಲ : ಯಡಿಯೂರಪ್ಪ

ಜೆಡಿಎಸ್ ಭದ್ರಕೋಟೆ ಛಿದ್ರ

ಇನ್ನೂ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಎಂ.ಟಿ ಕೃಷ್ಣ ಗೆಲುವು ಸಾಧಿಸಿದ್ದರೆ, ಚಿಕ್ಕನಾಯಕನಹಳ್ಳಿಯಲ್ಲಿ ಸಿ.ಬಿ ಸುರೇಶ್ ಬಾಬು ಅವರನ್ನು ಈ ಬಾರಿ ಮತದಾರರು ಕೈ ಹಿಡಿದಿದ್ದಾರೆ. ಜೆಡಿಎಸ್ ಭದ್ರಕೋಟೆಯಾಗಿದ್ದ ಮಧುಗಿರಿ ಹಾಗೂ ತುಮಕೂರು ಗ್ರಾಮಾಂತರ ಕ್ಷೇತ್ರ ಈ ಬಾರಿ ಕೈತಪ್ಪಿದೆ.

ಇಬ್ಬರು ಸಚಿವರು ಮನೆಗೆ

ಜಿಲ್ಲೆಯ ಇಬ್ಬರು ಬಿಜೆಪಿ ಸಚಿವರು ಈ ಬಾರಿ ಸೋಲು ಕಂಡಿದ್ದಾರೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿ ಜೆ.ಸಿ ಮಾಧುಸ್ವಾಮಿ ಸಣ್ಣ ನೀರಾವರಿ ಸಚಿವರಾಗಿದ್ದರು. ತಿಪಟೂರು ಕ್ಷೇತ್ರದಿಂದ ಗೆದ್ದು ಬಿ.ಸಿ ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದರು. ಮತದಾರರು ಇಬ್ಬರೂ ಸಚಿವರನ್ನು ಈ ಬಾರಿ ಮನೆ ಕಳಿಸಿದ್ದಾರೆ.

RELATED ARTICLES

Related Articles

TRENDING ARTICLES