ಬೆಂಗಳೂರು : ರಾಮನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು ಮಾಜಿ ಮುಖ್ಯಮಂತ್ರಿ ಪುತ್ರ ಹಾಗೂ ಜೆಡಿಎಸ್ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದಾರೆ.
ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಕ್ಬಾಲ್ ಹುಸೇನ್ ಭರ್ಜರಿ ಜಯ ಸಾಧಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಖುದ್ದು ಇಕ್ಬಾಲ್ ಹುಸೇನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕಳೆದ ಬಾರಿ ರಾಮನಗರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದ ಅನಿತಾ ಕುಮಾರಸ್ವಾಮಿ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕ್ಷೇತ್ರ ತ್ಯಾಗ ಮಾಡಿದ್ದರು. ಆದರೆ, ಅನಿತಾ ಕುಮಾರಸ್ವಾಮಿಯವರ ನಿರ್ಧಾರ ಜೆಡಿಎಸ್ ಗೆ ಕೈ ಹಿಡಿಯಲಿಲ್ಲ.
ತಾಯಿಯ ಕ್ಷೇತ್ರ ತ್ಯಾಗದ ಫಲವಾಗಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದರು. ಆದ್ರೆ, ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ.
ಇದನ್ನೂ ಓದಿ : ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲೇ ಮುಖಭಂಗ
ಎಂಪಿ ಚುನಾವಣೆಯಲ್ಲೂ ಸೋಲು
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ವಿರುದ್ಧ ನಿಖಿಲ್ ಸೋತಿದ್ದರು.
ದಳಪತಿ ಕೋಟೆ ಛಿದ್ರ ಛಿದ್ರ
ಇನ್ನೂ ಜೆಡಿಎಸ್ ಭದ್ರ ಕೋಟೆ ಆಗಿರುವ ಮೈಸೂರಿನಲ್ಲಿ ಈ ಬಾರಿ ದಳಪತಿಗೆ ಬಿಗ್ ಶಾಕ್ ಎದುರಾಗಿದೆ. ಅತೀ ಹೆಚ್ಚು ಸ್ಥಾನ ಗೆಲ್ಲುವ ಜೆಡಿಎಸ್ ಕನಸು ಭಗ್ನವಾಗಿದೆ. ಕುಮಾರಸ್ವಾಮಿ ಆಪ್ತ ಸ್ನೇಹಿತ ಸಾ.ರಾ ಮಹೇಶ್‌ಗೆ ಹೀನಾಯ ಸೋತ್ತಿದ್ದಾರೆ.