ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಮ್ಮ ತವರು ಜಿಲ್ಲೆಯಲ್ಲೇ ಭಾರೀ ಮುಖಭಂಗವಾಗಿದೆ.
ಹಾವೇರಿಯಲ್ಲಿ ಸುಮಾರು 6 ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಕೇವಲ ಮುಖ್ಯಮಂತ್ರಿ ಬೊಮ್ಮಾಯಿ ಕ್ಷೇತ್ರವಾದ ಶಿಗ್ಗಾಂವಿಯಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದೆ.
ಈ ಬೆಳವಣಿಗೆ ಸಿಎಂ ಹಾಗೂ ಬಿಜೆಪಿ ಆತಂಕಕ್ಕೆ ಕಾರಣವಾಗಿದೆ. ಬ್ಯಾಡಗಿ, ಹಾವೇರಿ, ಹಿರೇಕೆರೂರ, ರಾಣೆಬೆನ್ನೂರು, ಹಾನಗಲ್‌ನಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಸಚಿವ ಬಿ.ಸಿ ಪಾಟೀಲ್ ಅವರಿಗೆ ಹಿನ್ನಡೆಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 4ನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ
ಬಿಜೆಪಿಯ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ಗೆ 2181 ಮತಗಳ ಮುನ್ನಡೆ
ಮುಧೋಳದಲ್ಲಿ ಬಿಜೆಪಿ ಗೋವಿಂದ ಕಾರಜೋಳಗೆ 5,000 ಮತಗಳ ಹಿನ್ನಡೆ
ಚಾಮರಾಜನಗರದಲ್ಲಿ 6ನೇ ಸುತ್ತಿನಲ್ಲೂ ಕಾಂಗ್ರೆಸ್ನ ಪುಟ್ಟರಂಗ ಶೆಟ್ಟಿ ಮುನ್ನಡೆ
ಚನ್ನಗಿರಿಯಲ್ಲಿ ಕಾಂಗ್ರೆಸ್ನ ಶಿವಗಂಗಾ ಬಸವರಾಜ್ಗೆ ಮುನ್ನಡೆ
ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿಗೆ ಹಿನ್ನಡೆ
ಬಳ್ಳಾರಿ ಗ್ರಾಮೀಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಹಿನ್ನಡೆ
ಕಂಪ್ಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಎನ್.ಗಣೇಶ್ ಮುನ್ನಡೆ
ಸೊರಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಮುನ್ನಡೆ
ಬಳ್ಳಾರಿ, ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಮಾಲ್
ಬಳ್ಳಾರಿಯ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮುನ್ನಡೆ
ಚಿತ್ರದುರ್ಗದ 6 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಮುನ್ನಡೆ
ಕಾಂಗ್ರೆಸ್ 95, ಬಿಜೆಪಿ 61ರಲ್ಲಿ ಮುನ್ನಡೆ
224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ-61, ಕಾಂಗ್ರೆಸ್-95, ಜೆಡಿಎಸ್-19, ಕೆಆರ್ಪಿಪಿ 1, ಎನ್ಸಿಪಿ-1, ಎಸ್ಕೆಪಿ-1 ಮತ್ತು ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 180 ಕ್ಷೇತ್ರಗಳಲ್ಲಿಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.