Monday, December 23, 2024

ದೇವೇಗೌಡ್ರನ್ನು ಸುತ್ತಿಸಿದವರಿಗೆ ದೇವರು ಬುದ್ಧಿಕೊಡಲಿ : ಚಲುವರಾಯಸ್ವಾಮಿ

ಬೆಂಗಳೂರು : ಆರೋಗ್ಯ ಸಮಸ್ಯೆಯ ನಡುವೆಯೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಸುತ್ತಿಸಿದವರಿಗೆ ದೇವರು ಬುದ್ಧಿಕೊಡಲಿ ಎಂದು ಶಾಸಕ ಎನ್.ಚಲುವರಾಯಸ್ವಾಮಿ ಪರೋಕ್ಷವಾಗಿ ಕುಮಾರಸ್ವಾಮಿಗೆ ಟಕ್ಕರ್ ಕೊಟ್ಟಿದ್ದಾರೆ.

ಆದಿಚುಂಚನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೇವೇಗೌಡರು ನಮ್ಮ ತಂದೆ ಆಗಿದ್ರೆ ಕೂತಿದ್ದ ಕಡೆ ಬಹಳ ಸುಖವಾಗಿ, ನೆಮ್ಮದಿಯಿಂದ ನೋಡಿಕೊಳ್ಳುತ್ತಿದ್ದೆ ಎಂದು ಹೇಳಿದ್ದಾರೆ.

ದೇವೇಗೌಡರು ನನ್ನ ವಿರುದ್ಧ ಏನು ಮಾತನಾಡಿಲ್ಲ. ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರನ್ನು ಈ ವಯಸ್ಸಿನಲ್ಲಿ ಆರೋಗ್ಯದ ಸಮಸ್ಯೆಯ ನಡುವೆ ಸುತ್ತಾಡಿಸಿದ್ದು ತಪ್ಪು. ಅವರು ಕೂತಿರುವ ಕಡೆ ಆಶೀರ್ವಾದ ತೆಗೆದುಕೊಂಡು ಬರಬೇಕಿತ್ತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಜೆಡಿಎಸ್ ಭದ್ರಕೋಟೆಯಲ್ಲೇ ಸೋತ ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ನಾಯಕರು ದೇವೇಗೌಡರ ಆಶೀರ್ವಾದ ತೆಗೆದುಕೊಂಡು ಚುನಾವಣೆ ಮಾಡಬೇಕಿತ್ತು. ಅದನ್ನು ಬಿಟ್ಟು ರಾಜ್ಯ ಸುತ್ತಿದ್ದು ಸರಿಯಲ್ಲ. ಅವರನ್ನು ಸುತ್ತಿಸಿದವರಿಗೆ ದೇವರು ಬುದ್ಧಿಕೊಡಲಿ. ಅವರಿಂದ ಉಪಯೋಗ ಪಡೆದುಕೊಂಡು ಎಂಎಲ್‌ಎ, ಮಂತ್ರಿ, ಮುಖ್ಯಮಂತ್ರಿ ಎಲ್ಲ ಖಾತೆ ಅನುಭವಿಸಿದ್ದಾರೆ. ಈಗಲೂ ಅವರನ್ನು ಬಿಡಲು ತಯಾರು ಇಲ್ಲ ಅವರು ಎಂದು ಕುಟುಕಿದ್ದಾರೆ.

ನಮಗೆ ಇಂತಹ ವಯಸ್ಸಿನಲ್ಲಿ ನಮ್ಮ ತಂದೆ ನೋಡಿಕೊಳ್ಳುವ ಭಾಗ್ಯ ಸಿಗಲಿಲ್ಲ. ಈ ವಯಸ್ಸಿನಲ್ಲಿ ಅವರನ್ನು ಕೂತಲ್ಲೇ ಜೋಪಾನವಾಗಿ ನೋಡಿಕೊಳ್ಳಬೇಕಿತ್ತು ಎನ್ನುವ ಮೂಲಕ ಮಾಜಿ ಸಿಎಂ ಹೆಚ್ಡಿಕೆ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಚಲುವರಾಯಸ್ವಾಮಿ ಪರೋಕ್ಷವಾಗಿ ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES