Wednesday, January 22, 2025

ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಡಿ.ಕೆ ಶಿವಕುಮಾರ್

ತುಮಕೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಪೂಜ್ಯರ ಆಶೀರ್ವಾದ ಪಡೆದಿದ್ದಾರೆ.

ಲಿಂಗೈಕ್ಯ ಡಾ.‌ ಶಿವಕುಮಾರ ಸ್ವಾಮೀಜಿ ಗದ್ದುಗೆ ವಿಶೇಷ ಪೂಜೆ ಸಲ್ಲಿಸಿ, ನಮಸ್ಕರಿದ್ದಾರೆ. ಬಳಿಕ, ಧಾನ್ಯ ಮಂದಿರದಲ್ಲಿ ಕೆಲಕಾಲ ಕುಳಿತು ಪ್ರಾರ್ಥನೆ ಮಾಡಿದ್ದಾರೆ.

ಬಳಿಕ, ಸಿದ್ದಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳು ಡಿ.ಕೆ ಶಿವಕುಮಾರ್ ಅವರಿ​ಗೆ ಶಾಲು ಹೊದಿಸಿ, ಹಾರ ಹಾಕಿ ಆಶೀರ್ವಾದ ಮಾಡಿದರು. ಜಿಲ್ಲಾ ಕಾಂಗ್ರೆಸ್‌ ಮುಖಂಡರು ಜೊತೆಗಿದ್ದರು.

ಡಿಕೆಶಿ ಸಿಎಂ ಮಾಡುವಂತೆ ಒತ್ತಾಯ

ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ನಿರ್ಣಯಿಸಲಾಗಿದೆ. ಸಭೆಯಲ್ಲಿ ಮಾತನಾಡಿದ ಸ್ಫಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿ, ಕಳೆದ ಬಾರಿ ಕುಮಾರಸ್ವಾಮಿಗೆ ಬೆಂಬಲಿಸಿದ್ದೆವು. ಈ ಬಾರಿ ಡಿ.ಕೆ ಶಿವಕುಮಾರ್ ಅವರಿಗೆ ಬೆಂಬಲಿಸುತ್ತಿದ್ದೇವೆ ಎಂದಿದ್ದಾರೆ.

ಸಿದ್ದು ಪರ ಕುರುಬ ಸಮುದಾಯ ಬ್ಯಾಟಿಂಗ್

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಕುರುಬ ಸಮುದಾಯ ಒತ್ತಾಯಿಸಿದೆ. ಬೆಂಗಳೂರಿನಲ್ಲಿ ನಡೆದ ಕುರುಬ ಜನಾಂಗದ ಮುಖಂಡರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್, ವರಿಷ್ಠರಿಗೆ ಒತ್ತಡ ಹೇರಲು ನಿರ್ಧರಿಸಲಾಗಿದೆ.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅನ್ನಭಾಗ್ಯ, ಇಂದಿರಾ ಕ್ಯಾಂಟಿನ್ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಜನಮನ ಗೆದ್ದಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

RELATED ARTICLES

Related Articles

TRENDING ARTICLES