Friday, March 29, 2024

ಸೋಲಿನಿಂದ ಕಂಗೆಟ್ಟು ‘ಓಡಿ ಹೋಗುವ ಜಾಯಮಾನ ನಮ್ಮದಲ್ಲ’ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ರಾಮನಗರ ಕ್ಷೇತ್ರದಲ್ಲಿ ಸೋಲುಕಂಡಿರುವ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಸೋಲಿನ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು ಎಂದು ಬರೆದುಕೊಂಡಿದ್ದಾರೆ.

ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ ಎಂದು ಹೇಳಿದ್ದಾರೆ.

ಎಡವಿದ್ದೇನೆ.. ಮತ್ತೆ ಎದ್ದು ಓಡುತ್ತೇನೆ

ನಾನು ನನ್ನ ತಾತನವರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ, ತಂದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ ಎಂದು ನಿಖಿಲ್ ಭಾವುಕ ನುಡಿಗಳನ್ನಾಡಿದ್ದಾರೆ.

ಇದನ್ನೂ ಓದಿ : ರಾಜಕೀಯಕ್ಕೆ ಗುಡ್​ ಬೈ ಹೇಳಿದ ರೇಣುಕಾಚಾರ್ಯ

ಪುನಾ ಪುಟಿದೆದ್ದು ಬರುತ್ತೇವೆ

ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷವನ್ನು ಹರಸಿದ ಎಲ್ಲಾ ಮತದಾರ ಬಂಧುಗಳನ್ನು ನಾನು ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಗನನ್ನೇ ಗೆಲ್ಸೋಕೆ ಆಗಿಲ್ಲ

ರಾಮನಗರದಲ್ಲಿ‌ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅವರಿಗೆ ಸೋಲಾಗಿದೆ. ಅಲ್ಲೇ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ. ಮತ್ತೇ ನನ್ನ ಸೋಲಿಸಲು ಹೊರಟಿದ್ರು ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಕುಟುಕಿದ್ದಾರೆ. ರಾಮನಗರದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಛೇಡಿಸಿದ್ದಾರೆ.

RELATED ARTICLES

Related Articles

TRENDING ARTICLES