ಬೆಂಗಳೂರು : ಈ ಬಾರಿಯ SSLC ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶವಿದೆ. ಈ ಪೂರಕ ಪರೀಕ್ಷಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇಂದೇ ಕೊನೆದಿನವಾಗಿದೆ.
ಹೌದು, ಮಾರ್ಚ್/ಏಪ್ರಿಲ್ 2023ರ ಮಾಹೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದ್ದು, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಪೂರಕ ಪರೀಕ್ಷೆಗೆ ಒಂದು ವಿಷಯಕ್ಕೆ 370ರೂ, 2 ವಿಷಯಕ್ಕೆ 461ರೂ ಮತ್ತು ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ 620ರೂಗಳನ್ನು ನಿಗದಿ ಮಾಡಲಾಗಿದೆ. ಇದೇ ವೇಳೆ ಮರುಏಣಿಕೆ ಬಯಸುವ ವಿದ್ಯಾರ್ಥಿಗಳು ಇಂದಿನಿಮದ ಮೇ 21ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಇಲ್ಲಿಯವರೆಗೂ ಅರ್ಜಿ ಸಲ್ಲಿಸದೆ ಇದ್ದಲ್ಲಿ, ಇಂದೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.