Wednesday, January 22, 2025

ಸುಧಾಕರ್ ಸೋತಿದ್ದಕ್ಕೆ ‘ಕೆರೆಗೆ ಹಾರಿ ಅಭಿಮಾನಿ ಆತ್ಮಹತ್ಯೆ’

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಸೋಲು ಕಂಡಿದ್ದಾರೆ. ಇದರಿಂದ ಮನನೊಂದು ಅಂಧಾಭಿಮಾನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಘಟನೆ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಚಿಕ್ಕಬಳ್ಳಾಪುರ ‌ನಗ‌ರದ ಕೋಟೆ ನಿವಾಸಿ ವೆಂಕಟೇಶ ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದ. ಇದೀಗ ಅವರ ಸೋಲಿನಿಂದ ಬೇಸರಗೊಂಡು ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ‘ಆಟೋ ಚಾಲಕನ ಮೇಲೆ ಹಲ್ಲೆ’

ಪ್ರದೀಪ್ ಈಶ್ವರ್ ಗೆಲುವು

ಮಾಜಿ ಸಚಿವ ಡಾ.ಕೆ ಸುಧಾಕರ್‌ ವಿರುದ್ಧ ಕಾಂಗ್ರೆಸ್‌ ಪಕ್ಷದ ಯುವ ನಾಯಕ ಹಾಗೂ ಅಭ್ಯರ್ಥಿ ಪ್ರದೀಪ್ ಈಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 10,642 ಮತಗಳ ಅಂತರದಿಂದ ಸುಧಾಕರ್ ಅವರನ್ನು ಸೋಲಿಸಿದ್ದಾರೆ.

ರಾಜಕಾರಣಕ್ಕೆ ಹೊಸದಾಗಿ ಪಾದಾರ್ಪಣೆ ಮಾಡಿ ತಿಂಗಳ ಕಾಲ ಚುನಾವಣಾ ಪ್ರಚಾರ ಮಾಡಿದ್ದ ಪ್ರದೀಪ್ ಈಶ್ವರ್ ಅವರು ಸುಧಾಕರ್ ಅವರನ್ನು ಮಣಿಸಿದ್ದು ಅಚ್ಚರಿಗೆ ಕಾರಣವಾಗಿದೆ. ಚಿಕ್ಕಬಳ್ಳಾಪುರ ಫಲಿತಾಂಶ ಎಲ್ಲರನ್ನು ಹುಬ್ಬೇರುವಂತೆ ಮಾಡಿದೆ.

RELATED ARTICLES

Related Articles

TRENDING ARTICLES