Monday, December 23, 2024

ಹೈಕಮಾಂಡ್ ನಿರ್ಧಾರವೇನೆಂದು ನನಗೆ ತಿಳಿದಿಲ್ಲ ; ಸಿದ್ದರಾಮಯ್ಯ

ನವದೆಹಲಿ: ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ.

ಹೌದು, ಕರ್ನಾಟಕ ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ ಎಂದು ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ದೆಹಲಿಯ ಐಟಿಸಿ ಮೌರ್ಯ ಹೋಟೆಲ್​ನಲ್ಲಿ ಸೋಮವಾರ ರಾತ್ರಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹೈಕಮಾಂಡ್​ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ. ಕರ್ನಾಟಕದಲ್ಲಿ ಯಾವ ಯಾವ ಬದಲಾವಣೆ ಆಗುತ್ತಿದೆ ಎಂಬುದು ಎಲ್ಲರಿಗೆ ತಿಳಿದಿದೆ.

ಹೈಕಮಾಂಡ್​ ಭೇಟಿಯ ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು. ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿದ್ದ AICC ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ಸೋಮವಾರ ಬೆಳಗ್ಗೆ ತೆರಳಿದ್ದರು. ನಂತರ ಶಾಸಕರ ಅಭಿಪ್ರಾಯವನ್ನು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಲುಪಿಸಿದ್ದರು.

 

RELATED ARTICLES

Related Articles

TRENDING ARTICLES