Sunday, December 22, 2024

ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ; ಜಿ. ಪರಮೇಶ್ವರ್​​

ಬೆಂಗಳೂರು: ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಂತ ಪರೋಕ್ಷವಾಗಿ ಶಾಸಕ ಡಾ.ಜಿ.ಪರಮೇಶ್ವರ್​​ ಹೇಳಿಕೆ ನೀಡಿದ್ದಾರೆ.

ಹೌದು, ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನನಗೂ ಅವಕಾಶ ಕೊಟ್ಟರೆ ನಾನು ಕೂಡ ಸಿಎಂ ಅಕಾಂಕ್ಷಿ. ಅಂದ್ರೆ ನಾನು ಪಕ್ಷದ ವರಿಷ್ಠರನ್ನು ನಂಬಿದ್ದೇನೆ ಎಂದು ಹೇಳಿದ್ದಾರೆ.

50 ಶಾಸಕರ ಗುಂಪು ಕಟ್ಟಿಕೊಂಡು ಹೋಗಬಹುದು 

ನಾನು ಕೂಡ 50 ಶಾಸಕರ ಗುಂಪು ಕಟ್ಟಿಕೊಂಡು ಹೋಗಬಹುದು. ಆದರೆ ನಾನು ಹಾಗೆ ಮಾಡುವುದಿಲ್ಲ.ನನಗೆ ಪ್ರಿನ್ಸಿಪಲ್ ಇದೆ. ನನಗೆ ಶಿಸ್ತು ಮುಖ್ಯ. ಹೈಕಮಾಂಡ್ ಜವಾಬ್ದಾರಿ ಕೊಟ್ಟರೆ ಖಂಡಿತ ಮಾಡುತ್ತೇನೆ. ಅವಕಾಶ ಕೊಟ್ಟರೆ ಮಾಡೊಲ್ಲ ಅಂತ ಹೇಳೊಲ್ಲ. ಹೈಕಮಾಂಡ್​ಗೆ ನನ್ನ ಬಗ್ಗೆ, ನನ್ನ ಕೆಲಸದ ಬಗ್ಗೆ ಎಲ್ಲವೂ ಗೊತ್ತಿದೆ. ಲಾಬಿ ಮಾಡಬಾರದು ಅಂತ ಸುಮ್ಮನೆ ಇದ್ದೇನೆ.

ನಾನು ಸುಮ್ಮನೆ ಇದ್ದೇನೆ ಅಂದರೆ ಅಸಮರ್ಥ ಅಂತ ಅಲ್ಲ. ನಾನು ಸಮರ್ಥನೆ ಎನ್ನುವ ಮೂಲಕ ಪರೋಕ್ಷವಾಗಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯನವರದ್ದು ಶಕ್ತಿ ಪ್ರದರ್ಶನ 

ಶಾಸಕರ ಜೊತೆ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಮಾಡಿದ ವಿಚಾರವಾಗಿ ಮಾತನಾಡಿದ ಅವರು ಕೆಲವು ಶಾಸಕರು ಅವರ ನಾಯಕರ ಜೊತೆ ಹೋಗಿರುತ್ತಾರೆ. ನಾವು ಕೂಡ ಶಾಸಕರನ್ನು ಕರೆದುಕೊಂಡು ಹೋಗಬಹುದು‌. ಆದರೆ ನಾವು ಹೋಗಲ್ಲ. ಕೆಲವರು ಹೋಗಿದ್ದಾರೆ ಅಷ್ಟೆ. ಅದಕ್ಕೆ ಶಕ್ತಿ ಪ್ರದರ್ಶನ ಅನ್ನೋದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

 

 

RELATED ARTICLES

Related Articles

TRENDING ARTICLES