Wednesday, January 22, 2025

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ‘ಶೂಟರ್ ಅಂಜುಮ್ ಮೌದ್ಗಿಲ್’

ದೆಹಲಿ : ಭಾರತದ ಅನುಭವಿ ಶೂಟರ್ ಅಂಜುಮ್ ಮೌದ್ಗಿಲ್ ಅವರು ಇಂದು ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಹಿಂದೆ ರಾಷ್ಟ್ರಪತಿಗಳಿಂದ ತಮ್ಮ ಪ್ರಶಸ್ತಿಗಳನ್ನು ಸ್ವೀಕರಿಸಲು ಸಾಧ್ಯವಾಗದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪುರಸ್ಕೃತರು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

ಹಾಕಿ ತರಬೇತುದಾರ ಸರ್ಪಾಲ್ ಸಿಂಗ್ ಅವರು ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸಿದರು.

ದಿವಂಗತ ಟೆನಿಸ್ ಕೋಚ್ ನರೇಶ್ ಕುಮಾರ್ ಅವರ ಕುಟುಂಬ ಸದಸ್ಯರು ದ್ರೋಣಾಚಾರ್ಯ ಪ್ರಶಸ್ತಿಯನ್ನು ಪಡೆದುಕೊಂಡರು.

ಇದನ್ನೂ ಓದಿ : ಮೆಸ್ಸಿ ಮುಡಿಗೆ ‘ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿ’

ಭಾರತದ ಅನುಭವಿ ಶೂಟರ್ ಅಂಜುಮ್ ಮೌದ್ಗಿಲ್ ಅವರು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.

ಕುಸ್ತಿಪಟುಗಳ ಬೇಡಿಕೆ ಈಡೇರಿಸಲಾಗಿದೆ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಎಲ್ಲಾ ಬೇಡಿಕೆ ಈಡೇರಿಸಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES