Monday, December 23, 2024

ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಡೇಟ್​ ಫಿಕ್ಸ್..!

ಬೆಂಗಳೂರು: ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ (Karnataka Congress) ಮ್ಯಾಜಿಕ್‌ ನಂಬರ್‌ ದಾಟಿ ಬಹುಮತ ಪಡೆದುಕೊಂಡಿದೆ. ಆದರೆ, ಫಲಿತಾಂಶ ಪ್ರಕಟಗೊಂಡು ಮೂರು ದಿನಗಳು ಕಳೆದರೂ ಸಿಎಂ ಯಾರು ಎನ್ನುವುದು ಮಾತ್ರ ಇನ್ನೂ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಕುರ್ಚಿಗಾಗಿ ಜೋಡೆತ್ತು ಪೈಪೋಟಿಗೆ ಇಂದು ತರೆಬೀಳಲಿದೆ.

ಹೌದು, ಇದೀಗ ಬಂದ ಸುದ್ದಿ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಪಕ್ಕಾ ಎನ್ನಲಾಗುತ್ತಿದ್ದು, ರಾಹುಲ್ ಗಾಂಧಿ ಸಭೆ ಬಳಿಕ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಅದು ಹಾಗೇ ಆದರೆ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾದರೆ ನಾಳೆ(ಮೇ 18) ಮಧ್ಯಾಹ್ನ 3:30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ

ಇನ್ನೂ ಇದರ ನಡುವೆ ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗ ಹಾಗೂ ಕಠೀರವ ಸ್ಟೇಡಿಯಂನಲ್ಲಿ ಆಯೋಜಿಸಲು ಚಿಂತನೆಗಳು ನಡೆದಿವೆ.

ಒಂದು ವೇಳೆ ನಾಳೆ ತಪ್ಪಿದರೆ ಶನಿವಾರ ಅಂದರೆ ಮೇ 20ರಂದು ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆ ನಡೆದಿದೆ. ಶುಕ್ರವಾರ(ಮೇ 19) ಅಮಾವಾಸ್ಯೆ ಇರುವ ಹಿನ್ನಲೆ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರ‌ ಸಲಹೆ ನೀಡಿದ್ದಾರೆ. ಹೀಗಾಗಿ ಮೇ 18 ಇಲ್ಲ ಮೇ 20ರಂದು ಪ್ರಮಾಣ ವಚನ ಸ್ವೀಕಾರವಾಗಲಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES